
ಬೆಂಗಳೂರು, 17 ಜುಲೈ (ಹಿ.ಸ.):
ಆ್ಯಂಕರ್:
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ 2025-26 ಹಾಗೂ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದ ಸೇತುವೆಗಳ ಪುನರ್‌ನಿರ್ಮಾಣ, ಪುನಶ್ಚೇತನ ಹಾಗೂ ದುರಸ್ತಿ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಸಮಗ್ರವಾಗಿ ಪರಿಶೀಲಿಸಿದರು.
ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಟ್ಟಡ ಮತ್ತು ಕಾಲೋನಿ ರಸ್ತೆ ಕಾಮಗಾರಿಗಳು, ಬುದ್ಧ-ಬಸವ-ಅಂಬೇಡ್ಕರ್ ಕಾಲೋನಿಗಳ ನಿರ್ಮಾಣ ಹಾಗೂ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಕುರಿತ ಪ್ರಸ್ತಾವನೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು.
ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಯೋಜನೆಗಳ ಪ್ರಯೋಜನ ಸಮಯಕ್ಕೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.