ಸೋನಮ್ ವಾಂಗ್ಚೂಕ್ಗೆ ಬೆಂಬಲ: ವಿಜಯಪುರದಲ್ಲಿ ಪ್ರತಿಭಟನೆ, ಡಿಸಿ ಕಚೇರಿ ಎದುರು ಧರಣಿ
ವಿಜಯಪುರ, 17 ಜುಲೈ (ಹಿ.ಸ.) ಆ್ಯಂಕರ್ : ಲಡಾಖ್ನ ಪರಿಸರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ಕೈಗೊಂಡಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ವೃತ್ತಗಳ ಮೂಲಕ ಪ್ರತಿಭಟ
ಧರಣಿ


ವಿಜಯಪುರ, 17 ಜುಲೈ (ಹಿ.ಸ.)

ಆ್ಯಂಕರ್ : ಲಡಾಖ್ನ ಪರಿಸರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ಕೈಗೊಂಡಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ವೃತ್ತಗಳ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು ಮಾತನಾಡಿ, ಲಡಾಖ್ನ ಪರಿಸರ ಸಂರಕ್ಷಣೆ, ಸ್ಥಳೀಯರ ಹಕ್ಕುಗಳ ರಕ್ಷಣೆ ಹಾಗೂ ಸಂವಿಧಾನಬದ್ಧ ಭರವಸೆಗಳ ಅನುಷ್ಠಾನಕ್ಕಾಗಿ ಸೋನಮ್ ವಾಂಗ್ಚೂಕ್ ನಡೆಸುತ್ತಿರುವ ಅಹಿಂಸಾತ್ಮಕ ಹೋರಾಟ ದೇಶದಾದ್ಯಂತ ಪ್ರಜಾಪ್ರಭುತ್ವ ಮತ್ತು ಪರಿಸರ ಸಂರಕ್ಷಣೆಯ ಸಂಕೇತವಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಲಡಾಖ್ನ ಜನರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸದೆ ತಕ್ಷಣ ಸ್ಪಂದಿಸಬೇಕು. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹಗಳಿಗೆ ಗೌರವ ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಪ್ರಗತಿಪರ, ಕಾರ್ಮಿಕ, ರೈತ, ವಿದ್ಯಾರ್ಥಿ ಹಾಗೂ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ ಘೋಷಣೆಗಳನ್ನು ಕೂಗಿದರು. ಪರಿಸರ ಸಂರಕ್ಷಣೆ, ಜನರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವಂತೆ ಆಗ್ರಹಿಸಿದರು.

ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸೋನಮ್ ವಾಂಗ್ಚೂಕ್ ಅವರ ಬೇಡಿಕೆಗಳ ಕುರಿತು ತಕ್ಷಣ ಸಕಾರಾತ್ಮಕ ಕ್ರಮ ಕೈಗೊಳ್ಳಬೇಕು ಹಾಗೂ ಲಡಾಖ್ ಜನರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande