
ಬಾಗಲಕೋಟೆ, 17 ಜುಲೈ (ಹಿ.ಸ.):
ಆ್ಯಂಕರ್ : ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯಡಿ ಡಿಬಿಟಿ ಸ್ಪರ್ಶ್ ಹಾಗೂ ಖಜಾನೆ-2 ತಂತ್ರಾಂಶಗಳ ಮೂಲಕ ಕೂಲಿ ಪಾವತಿ ಪ್ರಕ್ರಿಯೆಯನ್ನು ಏಕರೂಪವಾಗಿ, ಪಾರದರ್ಶಕವಾಗಿ ಹಾಗೂ ಸಮಯೋಚಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಶುಕ್ರವಾರ ರಾಜ್ಯ ಮಟ್ಟದ ವೀಡಿಯೋ ಕಾನ್ಫರೆನ್ಸ್ ಮೂಲಕ ತರಬೇತಿ ಕಾರ್ಯಕ್ರಮ ನಡೆಯಿತು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾದ ಈ ತರಬೇತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕು ಪಂಚಾಯತ್ ಕಚೇರಿಯಿಂದ ಅಧಿಕಾರಿಗಳು ಭಾಗವಹಿಸಿ ಯೋಜನೆಯ ವಿವಿಧ ತಾಂತ್ರಿಕ ಹಾಗೂ ಆಡಳಿತಾತ್ಮಕ ಅಂಶಗಳ ಕುರಿತು ಮಾಹಿತಿ ಪಡೆದುಕೊಂಡರು.
ತರಬೇತಿಯಲ್ಲಿ ಡಿಬಿಟಿ ಸ್ಪರ್ಶ, ವಿಬಿ ಗ್ರಾಮ
ಸಾಫ್ಟ್ ಹಾಗೂ ಖಜಾನೆ-2 ತಂತ್ರಾಂಶಗಳ ಸಮನ್ವಯದ ಮೂಲಕ ಕೂಲಿ ಪಾವತಿಯನ್ನು ವೇಗವಾಗಿ, ದೋಷರಹಿತವಾಗಿ ಹಾಗೂ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುವಂತೆ ಮಾಡುವ ವಿಧಾನಗಳ ಕುರಿತು ಅಧಿಕಾರಿಗಳಿಗೆ ಸವಿಸ್ತಾರವಾಗಿ ತಿಳಿಸಲಾಯಿತು. ಪಾವತಿ ಪ್ರಕ್ರಿಯೆಯಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳ ನಿವಾರಣೆ, ದಾಖಲೆಗಳ ನಿರ್ವಹಣೆ, ಆನ್ಲೈನ್ ಪರಿಶೀಲನೆ, ಡೇಟಾ ಅಪ್ಲೋಡ್ ಮತ್ತು ಪಾವತಿ ಮೇಲ್ವಿಚಾರಣೆಯ ಕುರಿತು ಸಹ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಧೋಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವಿವಿಧ ವಿಭಾಗಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು , ಕಾರ್ಯದರ್ಶಿಗಳು ಸೇರಿದಂತೆ ಸಂಬಂಧಿತ ಸಿಬ್ಬಂದಿ ಭಾಗವಹಿಸಿದ್ದರು.
ಈ ತರಬೇತಿಯಿಂದ ಯೋಜನೆಯಡಿ ಕೂಲಿ ಪಾವತಿ ವ್ಯವಸ್ಥೆ ಮತ್ತಷ್ಟು ಪಾರದರ್ಶಕ, ಪರಿಣಾಮಕಾರಿ ಹಾಗೂ ಸಮಯಬದ್ಧವಾಗಲಿದ್ದು, ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ ವಿಳಂಬವಿಲ್ಲದೆ ವೇತನ ಪಾವತಿಯಾಗಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರವು ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸುತ್ತಿವೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande