
ಬೆಂಗಳೂರು, 18 ಜುಲೈ (ಹಿ.ಸ.)
ಆಂಕರ್ :
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ (85) ಅವರು ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1954ರ ಮೇ 25ರಂದು ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ ಅವರು, ಅವರ ರಾಜಕೀಯ ಜೀವನದ ಪ್ರತಿ ಹಂತದಲ್ಲೂ ಬೆನ್ನೆಲುಬಾಗಿ ನಿಂತಿದ್ದರು. ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪತ್ನಿಯ ನಿಧನದ ಸುದ್ದಿಯ ನಂತರ ವ್ಹೀಲ್ ಚೇರ್ ಮೂಲಕ ಆಸ್ಪತ್ರೆಗೆ ಆಗಮಿಸಿದ ದೇವೇಗೌಡರು, ಭಾವುಕರಾಗಿ ಕಣ್ಣೀರು ಹಾಕಿದ ದೃಶ್ಯ ಮನಕಲಕುವಂತಿತ್ತು. ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದವರು ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮೊದಲಾದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / NAVEEN PARADESHII