ಅಪೌಷ್ಟಿಕತೆ ನಿರ್ಮೂಲನೆಯೊಂದಿಗೆ ಎಸ್ಐಆರ್ ಜಾಗೃತಿ ಕಾರ್ಯಕ್ರಮ
ಬಳ್ಳಾರಿ, 19 ಜುಲೈ (ಹಿ.ಸ.): ಆ್ಯಂಕರ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಹೇಳಿದರು. ಜಿಲ್ಲಾ ಪಂಚಾ
ಅಪೌಷ್ಟಿಕತೆ ನಿರ್ಮೂಲನೆಯೊಂದಿಗೆ ಎಸ್ಐಆರ್ ಜಾಗೃತಿ ಕಾರ್ಯಕ್ರಮ


ಬಳ್ಳಾರಿ, 19 ಜುಲೈ (ಹಿ.ಸ.):

ಆ್ಯಂಕರ್:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಹೇಳಿದರು.

ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಅಪೌಷ್ಟಿಕತೆ ನಿರ್ಮೂಲನಾ ಹಾಗೂ ಎಸ್ಐಆರ್ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಹ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಈ ವಿಶೇಷ ಪರಿಷ್ಕರಣೆ ಉತ್ತಮ ಅವಕಾಶವಾಗಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಪಂ ಸಹಾಯಕ ನಿರ್ದೇಶಕ ಎಂ. ಬಸವರಾಜ ಹಿರೇಮಠ, ಡಾ. ದುರ್ಗಪ್ಪ, ಡಾ. ಅಬ್ದುಲ್, ಡಾ. ಮಲ್ಲಿಕಾರ್ಜುನ, ಡಾ. ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಎಸ್ಐಆರ್ ಹಾಗೂ ಸ್ವೀಪ್ ಅಭಿಯಾನದ ಉದ್ದೇಶಗಳ ಕುರಿತು ಮಾಹಿತಿ ನೀಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande