
ನವದೆಹಲಿ, 19 ಜುಲೈ (ಹಿ.ಸ.):
ಆ್ಯಂಕರ್:
ಉಡಾವಣಾ ಕಾರ್ಯಾಚರಣೆಯ ಯಶಸ್ಸಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಟಿಡಿಬಿ) ಸ್ಕೈರೂಟ್ ಏರೋಸ್ಪೇಸ್‌ಗೆ ಅಭಿನಂದನೆ ಸಲ್ಲಿಸಿದ್ದು, ಇದು ಭಾರತದ ಖಾಸಗಿ ಬಾಹ್ಯಾಕಾಶ ವಲಯದ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದೆ.
ಟಿಡಿಬಿ ಪ್ರಕಾರ, ಈ ಸಾಧನೆಯು ದೇಶೀಯ ಬಾಹ್ಯಾಕಾಶ ತಂತ್ರಜ್ಞಾನ, ನಾವೀನ್ಯತೆ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಿದೆ. 2022ರ ರಾಷ್ಟ್ರೀಯ ತಂತ್ರಜ್ಞಾನ ದಿನದಂದು ದೇಶೀಯ ಉಡಾವಣಾ ವಾಹನ ತಂತ್ರಜ್ಞಾನ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಸ್ಕೈರೂಟ್‌ಗೆ ರಾಷ್ಟ್ರೀಯ ತಂತ್ರಜ್ಞಾನ ನವೋದ್ಯಮ ಪ್ರಶಸ್ತಿ ಪ್ರದಾನಿಸಲಾಗಿತ್ತು.
ಟಿಡಿಬಿ ಕಾರ್ಯದರ್ಶಿ ರಾಜೇಶ್ ಕುಮಾರ್ ಪಾಠಕ್, ಸ್ಕೈರೂಟ್‌ನ ಸಾಧನೆ ಇಡೀ ದೇಶಕ್ಕೆ ಹೆಮ್ಮೆಯ ವಿಷಯವಾಗಿದ್ದು, ನವೋದ್ಯಮದಿಂದ ಖಾಸಗಿ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿ ಬೆಳೆದಿರುವುದು ಭಾರತದ ಬಲಿಷ್ಠ ನಾವೀನ್ಯತೆ ಪರಿಸರ ವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಸ್ಕೈರೂಟ್ ಸಂಸ್ಥೆಯ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ (ಆರ್‌ಡಿಐ) ನಿಧಿಗೆ ಸಲ್ಲಿಸಿರುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ ಅವರು, ಏರೋಸ್ಪೇಸ್, ರಕ್ಷಣಾ, ಆರೋಗ್ಯ, ಶುದ್ಧ ಇಂಧನ ಹಾಗೂ ಡಿಜಿಟಲ್ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಶೀಯ ತಂತ್ರಜ್ಞಾನ ಅಭಿವೃದ್ಧಿಗೆ ಟಿಡಿಬಿ ನಿರಂತರ ಬೆಂಬಲ ನೀಡುತ್ತಿದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.