ಕೊಪ್ಪಳ : 8,78,899 ಗಣತಿ ನಮೂನೆಗಳ ಡಿಜಿಟಲೀಕರಣ
ಕೊಪ್ಪಳ, 20 ಜುಲೈ (ಹಿ.ಸ.): ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 19ರ ಸಂಜೆ 06 ಗಂಟೆಯವರೆಗೆ ಒಟ್ಟು 8,78,899 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ
ಕೊಪ್ಪಳ : 8,78,899 ಗಣತಿ ನಮೂನೆಗಳ ಡಿಜಿಟಲೀಕರಣ


ಕೊಪ್ಪಳ, 20 ಜುಲೈ (ಹಿ.ಸ.):

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 19ರ ಸಂಜೆ 06 ಗಂಟೆಯವರೆಗೆ ಒಟ್ಟು 8,78,899 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ.

ಜುಲೈ 19ರ ಸಂಜೆ 06 ಗಂಟೆಯವರೆಗೆ ಒಟ್ಟು 8,78,899 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande