
ನವದೆಹಲಿ, 20 ಜುಲೈ (ಹಿ.ಸ.):
ಆ್ಯಂಕರ್:ಭಾರತದ ಯುವಕರ ಧೈರ್ಯ, ಆತ್ಮವಿಶ್ವಾಸ ಮತ್ತು ಪರಿಶ್ರಮವೇ ಅಭಿವೃದ್ಧಿ ಹೊಂದಿದ ಭಾರತದ ಅತಿದೊಡ್ಡ ಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿರುವ ಅವರು, ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಧೈರ್ಯ ಕಳೆದುಕೊಳ್ಳದೆ, ಎಚ್ಚರಿಕೆಯಿಂದ ನಿರಂತರವಾಗಿ ಕಾರ್ಯನಿರ್ವಹಿಸಿ, ಕಷ್ಟಗಳನ್ನು ತಾಳ್ಮೆಯಿಂದ ಎದುರಿಸುವ ವ್ಯಕ್ತಿಯು ಅಂತಿಮವಾಗಿ ಯಶಸ್ಸು ಸಾಧಿಸುತ್ತಾನೆ ಎಂದು ತಿಳಿಸಿದ್ದಾರೆ.
ಇಂದಿನ ಭಾರತದ ಯುವಕರು ತಮ್ಮ ಧೈರ್ಯ, ಆತ್ಮವಿಶ್ವಾಸ, ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಕಠಿಣ ಪರಿಶ್ರಮದ ಮೂಲಕ ಹೊಸಹೊಸ ಸಾಧನೆಗಳನ್ನು ಮಾಡುತ್ತಿದ್ದಾರೆ. ಯುವಕರ ಈ ಶಕ್ತಿ, ಸಂಕಲ್ಪ ಮತ್ತು ಕಾರ್ಯನಿಷ್ಠೆಯೇ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕೆ ಅತಿದೊಡ್ಡ ಬಲ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.