ಕುಡಿವ ನೀರಿನ ಸಮಸ್ಯೆಗೆ ತ್ವರಿತ ಪರಿಹಾರ
ಕೊಪ್ಪಳ , 20 ಜುಲೈ (ಹಿ.ಸ.): ಆ್ಯಂಕರ್ : ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗೇಶನಹಳ್ಳಿ ಗ್ರಾಮಸ್ಥರಿಗೆ ಕುಡಿವ ನೀರಿನ ಭವಣೆ ತಪ್ಪಿದೆ ಎಂದು ಬೂದಗುಂಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ. ಕುಡಿವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಆಗುತ್ತ
Quick solution to drinking water problem


Quick solution to drinking water problem


Quick solution to drinking water problem


ಕೊಪ್ಪಳ , 20 ಜುಲೈ (ಹಿ.ಸ.):

ಆ್ಯಂಕರ್ : ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗೇಶನಹಳ್ಳಿ ಗ್ರಾಮಸ್ಥರಿಗೆ ಕುಡಿವ ನೀರಿನ ಭವಣೆ ತಪ್ಪಿದೆ ಎಂದು ಬೂದಗುಂಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಕುಡಿವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಆಗುತ್ತಿರುವುದನ್ನು ಪರಿಶೀಲಿಸಲು ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಎರಡು ದಿನಗಳೊಳಗೆ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರಿಂದಾಗಿ ಗ್ರಾಮಕ್ಕೆ ತ್ವರಿತವಾಗಿ ನೀರು ಸಿಗಲು ಸಾಧ್ಯವಾಗಿದೆ.

ಈ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಹೊಸ ಬೋರವೆಲ್ ಕೊರೆಯಿಸಿ ಪೈಪಲೈನ್ ಮಾಡಿದ್ದರೂ ಸಹ ಬೋರವೆಲ್ನ ಅಂತರ್ಜಲ ಮಟ್ಟ ಕಡಿಮೆಯಿಂದಾಗಿ ನೀರು ವೇಗವಾಗಿ ಬರುತ್ತಿರಲಿಲ್ಲ. ಇದರಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗಿತ್ತು.

ಈಗ ಖಾಸಗಿ ಬೋರವೆಲ್ ಅನ್ನು ಗ್ರಾಮ ಪಂಚಾಯತಿಯಿಂದ ಗುತ್ತಿಗೆ ಪಡೆದು ಪೈಪ್ಲೈನ್ ಮೂಲಕ ನೀರು ಒದಗಿಸಿ ನಾಗೇಶನಹಳ್ಳಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ತಾ.ಪಂ ಇಓ ದುಂಡಪ್ಪ ತುರಾದಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬೂದಗುಂಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ, ಉದ್ಯೋಗ ಖಾತ್ರಿಯ ಮೇಟ್ಗಳು ಮತ್ತು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande