
ಬೆಂಗಳೂರು, 20 ಜುಲೈ (ಹಿ.ಸ.)
ಆ್ಯಂಕರ್ :
ಆರ್.ಟಿ. ನಗರದ ಬಳಿ ಇರುವ 'ಮಂಜುನಾಥ ಕಾಂಡಿಮೆಂಟ್ಸ್' ಬೇಕರಿಯಲ್ಲಿ ಸಾಲ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪುಂಡರು ಬೇಕರಿ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬೇಕರಿ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.
ಬೇಕರಿ ಮಾಲೀಕ ಚಂದ್ರಶೇಖರ ಶೆಟ್ಟಿ ಎಂಬುವವರ ಮೇಲೆ ಈ ಹಲ್ಲೆ ನಡೆದಿದೆ. ಬೇಕರಿಗೆ ಬಂದ ದುಷ್ಕರ್ಮಿಗಳು ಸಾಲಕ್ಕೆ ವಸ್ತುಗಳನ್ನು ಕೇಳಿದಾಗ, ಮಾಲೀಕ ಚಂದ್ರಶೇಖರ ಶೆಟ್ಟಿ ಸಾಲ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪುಂಡರು ಮಾರಕಾಸ್ತ್ರಗಳಿಂದ ಚಂದ್ರಶೇಖರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಅಲ್ಲದೆ, ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯಿಂದ ಗಾಯಗೊಂಡಿರುವ ಚಂದ್ರಶೇಖರ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ಸಂಬಂಧ ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII