ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, 20 ಜುಲೈ (ಹಿ.ಸ.): ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು, ಈ ಕಾರ್ಯಕ್ರಮಗಳಡಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕ್ರೀಡಾ ಇಲಾಖೆ
ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, 20 ಜುಲೈ (ಹಿ.ಸ.):

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು, ಈ ಕಾರ್ಯಕ್ರಮಗಳಡಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

2025ನೇ ಸಾಲಿಗೆ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ನಗದು ಪುರಸ್ಕಾರ, 2025-26ನೇ ಸಾಲಿಗೆ ಕ್ರೀಡಾ ವಿದ್ಯಾರ್ಥಿ ವೇತನ, 2026-27ನೇ ಸಾಲಿಗೆ ಗುರಿ-ಒಲಂಪಿಕ ಪದಕ ಹಾಗೂ ಶೈಕ್ಷಣಿಕ ಶುಲ್ಕ ಮರುಪಾವತಿ ಕಾರ್ಯಕ್ರಮಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗುವುದು.

ಮೇಲಿನ ಪ್ರಶಸ್ತಿ, ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ: https://sevasindu.karnataka.gov.in ಮೂಲಕ ಕಡ್ಡಾಯವಾಗಿ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ, ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಅಥವಾ ದೂರವಾಣಿ ಸಂಖ್ಯೆ:08539-230121 ಗೆ ಅಥವಾ ಯುವ ಸಹಾಯವಾಣಿ 155265ಗೆ ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande