ಬಳ್ಳಾರಿ : ಜು.23ರಂದು ಯುವ ಸೌರಭ
ಬಳ್ಳಾರಿ, 21 ಜುಲೈ (ಹಿ.ಸ.) ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜುಲೈ 23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಬಿ.ಪಿ.ಎಸ್.ಸಿ. ಶಾಲಾ ಹಾಗೂ ಕಾಲೇಜಿನ ಶರಣ ಸಭಾಂಗಣದಲ್ಲಿ “ಯುವ ಸೌರಭ” ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಬಳ್ಳಾರಿ ನಗರ ವಿಧಾ
ಬಳ್ಳಾರಿ : ಜು.23ರಂದು `ಯುವ ಸೌರಭ'


ಬಳ್ಳಾರಿ : ಜು.23ರಂದು `ಯುವ ಸೌರಭ'


ಬಳ್ಳಾರಿ, 21 ಜುಲೈ (ಹಿ.ಸ.)

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜುಲೈ 23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಬಿ.ಪಿ.ಎಸ್.ಸಿ. ಶಾಲಾ ಹಾಗೂ ಕಾಲೇಜಿನ ಶರಣ ಸಭಾಂಗಣದಲ್ಲಿ “ಯುವ ಸೌರಭ” ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಶಾಸಕ ನಾರಾ ಭರತ್ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ. ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಿ.ಪಿ.ಎಸ್.ಸಿ. ಶಾಲಾ ಮತ್ತು ಕಾಲೇಜಿನ ಅಧ್ಯಕ್ಷ ಡಾ. ಎಸ್.ಜಿ.ವಿ.ಮಹಿಪಾಲ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ತ್ರಿಪುರಂಬ.ಹೆಚ್ ಸೇರಿದಂತೆ ಇತರರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ನಾಡಿನ ವೈವಿಧ್ಯಮಯ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಹಲವು ಪ್ರದರ್ಶನಗಳು ನೆರವೇರಲಿವೆ.

ಸುಗಮ ಸಂಗೀತ: ಕು. ಪುಟ್ಟರಾಜು .ಕೆ, ಡಿ.ಕಗ್ಗಲ್ (ಬಳ್ಳಾರಿ ತಾಲ್ಲೂಕು)

ಸಮೂಹ ನೃತ್ಯ: ಶಾರದ ನಾಟ್ಯ ಅಕಾಡೆಮಿ ಕಲಾವೃಕ್ಷ, ಬಳ್ಳಾರಿ

ಜಾನಪದ ಗೀತೆಗಳು: ಕು. ಮುದ್ದಮ್ಮ, ಮೆಟ್ರಿ (ಕಂಪ್ಲಿ ತಾಲ್ಲೂಕು)

ನಾಟಕ (ಮೊಹರಂ ಕೊನೆ ದಿನ): ಶಿವಶಂಕರ ಮತ್ತು ಸಂಗಡಿಗರು, ಸೋಮಸಮುದ್ರ (ಬಳ್ಳಾರಿ ತಾಲ್ಲೂಕು)

ಕಂಸಾಳೆ: ಶಿವಪ್ಪ .ಸಿ ಮತ್ತು ಸಂಗಡಿಗರು, ಗುತ್ತಿಗನೂರು (ಕುರುಗೋಡು ತಾಲ್ಲೂಕು)

ವೀರಗಾಸೆ: ಮಲ್ಲಿಕಾರ್ಜುನ ಸ್ವಾಮಿ ಮತ್ತು ಸಂಗಡಿಗರು, ತಾರಾನಗರ (ಸಂಡೂರು ತಾಲ್ಲೂಕು)

ಕಲಾಪ್ರೇಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande