ದೆಹಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿ
ನವದೆಹಲಿ, 21 ಜುಲೈ (ಹಿ.ಸ.): ಆ್ಯಂಕರ್: ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಪ್ರಕರಣ ಕಾಂಗ್ರಸ್ ಗೆ ದೊಡ್ಡ ಅಸ್ತ್ರವಾಗಿದೆ. ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಕೂಡಾ ದೆಹಲಿಯಲ್ಲಿ ಹೋರಾಟ ನಡೆಸಿದೆ. ಪರೀಕ್ಷಾ ಅಕ್ರಮಗಳ ನೈತಿಕ
Congress Protest in Delhi NEET Scam


ನವದೆಹಲಿ, 21 ಜುಲೈ (ಹಿ.ಸ.):

ಆ್ಯಂಕರ್:

ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಪ್ರಕರಣ ಕಾಂಗ್ರಸ್ ಗೆ ದೊಡ್ಡ ಅಸ್ತ್ರವಾಗಿದೆ. ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಕೂಡಾ ದೆಹಲಿಯಲ್ಲಿ ಹೋರಾಟ ನಡೆಸಿದೆ. ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ಲಾಠಿಚಾರ್ಜ್ ವಿರೋಧಿಸಿ ಪ್ರಧಾನಮಂತ್ರಿಗಳ ನಿವಾಸದ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜಂಟಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಮೆರವಣಿಗೆಯಲ್ಲಿ, ದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕ್ರಿಯವಾಗಿ ಪಾಲ್ಗೊಂಡು ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಸಂಪುಟ ವಿಸ್ತರಣೆ ಕಸರತ್ತಿನ ನಡುವೆಯೂ ಡಿ.ಕೆ. ಶಿವಕುಮಾರ್ ಅವರು ದೇಶದ ಯುವ ಜನತೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ರಾಷ್ಟ್ರೀಯ ನಾಯಕರೊಂದಿಗೆ ಹೋರಾಟದ ಅಂಗಳಕ್ಕೆ ಧುಮುಕಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪ್ರಮುಖ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾ ಹಗರಣ ಮುಚ್ಚಿಹಾಕಲು ಯತ್ನಿಸುತ್ತಿದೆ ಮತ್ತು ಧ್ವನಿ ಎತ್ತುವ ಯುವಕರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ನಾಯಕರು ತೀವ್ರವಾಗಿ ಕಿಡಿಕಾರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande