
ಬೆಂಗಳೂರು, 21 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಎಸ್ಐಆರ್ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಯು ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಬಿಜೆಪಿಯ ಟೀಕೆಗಳನ್ನು ತಳ್ಳಿಹಾಕಿದರು. ನುಸುಳುಕೋರರ ತಡೆಗಟ್ಟುವಿಕೆಗೆ ಪಿ ಆರ್ ಸಿ ಅಸ್ತ್ರವಾಗಿದ್ದು, ಕರ್ನಾಟಕದಲ್ಲಿ ಜನಿಸಿದ ಆಧಾರದ ಮೇಲೆ ಮತ್ತು ಕನಿಷ್ಠ 10 ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿರುವ ಬಗ್ಗೆ ಪುರಾವೆಗಳನ್ನು ಪರಿಶೀಲನೆ ನಡೆಯುತ್ತಿದ್ದೆ ದಾಖಲೆ ಸರಿಯಾಗಿದ್ದರೆ ಮಾತ್ರ ಅರ್ಹತೆ ನೀಡಲಾಗುತ್ತಿದೆ. ಬಾಂಗ್ಲಾದೇಶಿಗರಿಗೆ ಆಶ್ರಯ ನೀಡುವ ಪ್ರಶ್ನೆಯೇ ಇಲ್ಲ ಎಂದ ಅವರು, ಕೇಂದ್ರದ ಮಾರ್ಗಸೂಚಿಯಂತೆ ವ್ಯವಸ್ಥೆಯನ್ನು ಅಧಿಕೃತಗೊಳಿಸಲಾಗುತ್ತಿದೆ ಎಂದರು.
ಇದೇ ವೇಳೆ, ದೆಹಲಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತಿನ ಕುರಿತು ಪ್ರತಿಕ್ರಿಯಿಸಿ, ಹೈಕಮಾಂಡ್ ಒಪ್ಪಿಗೆ ಸಿಕ್ಕ ಕೂಡಲೇ ಮಂತ್ರಿಮಂಡಲ ವಿಸ್ತರಣೆಯಾಗಲಿದ್ದು, ಹೊಸ ಸಚಿವರ ಆಯ್ಕೆಯಲ್ಲಿ ಯುವ ನಾಯಕರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒಲವು ವ್ಯಕ್ತಪಡಿಸಿದರು. ಅಲ್ಲದೆ, ರಾಜ್ಯದ ಬರ ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪ್ರತಿ ಜಿಲ್ಲೆಗೆ ₹5 ಕೋಟಿ ಹಾಗೂ ಪ್ರತಿ ತಾಲ್ಲೂಕಿಗೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII