
ಬೆಂಗಳೂರು, 21 ಜುಲೈ (ಹಿ.ಸ.):
ಆ್ಯಂಕರ್:
ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ನೀಟ್ ಪರೀಕ್ಷೆ ಹಗರಣ ಮತ್ತು ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಚಲನಚಿತ್ರ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿರುವ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರ ಬೇಡಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಶೈಲಿಯನ್ನು ತರಾಟೆಗೆ ತೆಗೆದುಕೊಂಡಿರುವ ರಮ್ಯಾ, ಅಹಂಕಾರವನ್ನು ತೊರೆಯದ ಸರ್ಕಾರದ ಧರ್ಮದ ಬೋಧನೆಗಳಂತೆ ನಡೆಯದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದೇಶದ ಯುವಜನರು ತಮ್ಮ ಭವಿಷ್ಯಕ್ಕಾಗಿ ಹಾಗೂ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಡುವ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದಿರುವ ಅವರು, ಅದಾನಿ-ಅಂಬಾನಿ ಪರ ವಿನಾಯಿತಿ ನೀತಿಗಳನ್ನು ಟೀಕಿಸಿ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು, ಸರ್ಕಾರ ತನ್ನ ಅಹಂಕಾರ ಬದಿಗಿಟ್ಟು ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII