ವಾಣಿಜ್ಯ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರು ಸಾವು: ರಷ್ಯಾ ರಾಯಭಾರಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಭಾರತ
ನವದೆಹಲಿ, ಜುಲೈ 21(ಹಿ.ಸ): ಆ್ಯಂಕರ್:ಉಕ್ರೇನ್‌ನ ಒಡೆಸಾ ಬಂದರಿನಿಂದ ಹೊರಟಿದ್ದ ಎಂವಿ ಗೋಲ್ಡನ್ ಲಿಯೋ ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರಷ್ಯಾದ ಉಸ್ತುವಾರಿ ರಾ
भारत-रूस के झंडे (फाइल फोटो)।


ನವದೆಹಲಿ, ಜುಲೈ 21(ಹಿ.ಸ):

ಆ್ಯಂಕರ್:ಉಕ್ರೇನ್‌ನ ಒಡೆಸಾ ಬಂದರಿನಿಂದ ಹೊರಟಿದ್ದ ಎಂವಿ ಗೋಲ್ಡನ್ ಲಿಯೋ ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರಷ್ಯಾದ ಉಸ್ತುವಾರಿ ರಾಯಭಾರಿ (ಚಾರ್ಜ್ ಡಿ ಅಫೇರ್ಸ್) ವ್ಲಾದಿಮಿರ್ ಲಾದಾನೋವ್ ಅವರನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿ ಕಠಿಣ ಪ್ರತಿಭಟನೆ ದಾಖಲಿಸಿದೆ.

ಜುಲೈ 19ರಂದು ನಡೆದ ಈ ದಾಳಿಯಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಒಟ್ಟು ಒಂಬತ್ತು ಸಿಬ್ಬಂದಿ ಹಾಗೂ ಬಂದರಿನ ಒಬ್ಬ ಉಕ್ರೇನಿಯನ್ ಪೈಲಟ್ ಮೃತಪಟ್ಟಿದ್ದಾರೆ. ಮತ್ತೊಬ್ಬ ಭಾರತೀಯ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಗಳು ಹಾಗೂ ಅಮಾಯಕ ನಾಗರಿಕರ ಸಾವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಇಂತಹ ಘಟನೆಗಳು ಅಂತಾರಾಷ್ಟ್ರೀಯ ಸಮುದ್ರ ವ್ಯಾಪಾರದ ಸುರಕ್ಷತೆ, ಭದ್ರತೆ ಮತ್ತು ಸ್ಥಿರತೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಒಡೆಸಾ ಬಂದರಿನಿಂದ ಹೊರಟಿದ್ದ ಈ ಹಡಗಿನಲ್ಲಿ ಒಟ್ಟು 17 ಸಿಬ್ಬಂದಿ ಇದ್ದರು. ಅವರಲ್ಲಿ ಐವರು ಭಾರತೀಯರು ಇದ್ದರು. ದಾಳಿಯಿಂದ ಹಡಗಿಗೆ ಬೆಂಕಿ ಹೊತ್ತಿಕೊಂಡಿದ್ದು, ಭಾರೀ ಹಾನಿಯಾಗಿದೆ. ಅಂತಾರಾಷ್ಟ್ರೀಯ ಸಮುದ್ರ ವ್ಯಾಪಾರವು ಸುರಕ್ಷಿತವಾಗಿ ಮತ್ತು ಅಡೆತಡೆಯಿಲ್ಲದೆ ಸಾಗುವಂತೆ ನೋಡಿಕೊಳ್ಳುವುದು ಎಲ್ಲ ರಾಷ್ಟ್ರಗಳ ಜವಾಬ್ದಾರಿ ಎಂದು ಭಾರತ ಪುನರುಚ್ಚರಿಸಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande