ಕುರುಗೋಡು : ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆ
ಕುರುಗೋಡು, 21 ಜುಲೈ (ಹಿ.ಸ.) ಆ್ಯಂಕರ್ : ಕುರುಗೋಡು ತಾಲೂಕಿನ ಸೋಮಸಮುದ್ರ ಹಾಗೂ ದಮ್ಮೂರು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಭೇಟಿ ನೀಡಿ, ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದಾರೆ. ವಿಬಿ-
ಕುರುಗೋಡು : ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆ


ಕುರುಗೋಡು : ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆ


ಕುರುಗೋಡು : ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆ


ಕುರುಗೋಡು, 21 ಜುಲೈ (ಹಿ.ಸ.)

ಆ್ಯಂಕರ್ : ಕುರುಗೋಡು ತಾಲೂಕಿನ ಸೋಮಸಮುದ್ರ ಹಾಗೂ ದಮ್ಮೂರು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಭೇಟಿ ನೀಡಿ, ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದಾರೆ.

ವಿಬಿ-ಜಿ ರಾಮ್-ಜಿ ಯೋಜನೆಯಡಿ ಸಕ್ರಿಯವಾಗಿರುವ ಕೂಲಿಕಾರರಿಗೆ ಎನ್ಎಂಆರ್ ತೆಗೆದಿರುವುದರ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಾಗೂ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪ್ರಮುಖ ಸೂಚನೆಗಳನ್ನು ನೀಡಿದರು.

ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು, ಎನ್ಎಂಎಂಎಸ್ ಹಾಜರಾತಿ ಹಾಕಿರುವ ಕೂಲಿಕಾರರ ಮಾಹಿತಿಯನ್ನು ಪಡೆದುಕೊಂಡು, ಪ್ರತಿಯೊಬ್ಬ ಕೂಲಿಕಾರರಿಗೂ ಕಡ್ಡಾಯವಾಗಿ ಡಿಜಿಟಲ್ ಹಾಜರಾತಿ ನಮೂದಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ತಕ್ಷಣವೇ ಕೂಲಿಕಾರರಿಗೆ ಕೆಲಸ ಒದಗಿಸಬೇಕು. ವಿಬಿ-ಜಿ ರಾಮ್-ಜಿ ಯೋಜನೆಯಡಿಯ ವೈಯಕ್ತಿಕ ಕಾಮಗಾರಿಗಳಾದ ದನದ ಶೆಡ್, ಸೋಕ್ ಪಿಟ್, ಕುರಿ ಶೆಡ್ ಹಾಗೂ ಕೃಷಿ ಹೊಂಡ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಲು ಆಯಾ ಪಂಚಾಯತಿ ಸಿಬ್ಬಂದಿಗೆ ನಿರ್ದೇಶನ ನೀಡಿದರು.

ಸ್ವಸಹಾಯ ಸಂಘಗಳ ಮಹಿಳೆಯರ ಮೂಲಕ ಮನೆ-ಮನೆಗೆ ಭೇಟಿ ನೀಡಿ, ವಿಬಿ-ಜಿ ರಾಮ್-ಜಿ ಯೋಜನೆಯಡಿ ಸಿಗುವ ವೈಯಕ್ತಿಕ ಕಾಮಗಾರಿಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲು ತಿಳಿಸಿದರು.

ಕುರುಗೋಡು ತಾಪಂ ಗ್ರಾಮೀಣ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕ ಶಿವರಾಮರೆಡ್ಡಿ, ದಮ್ಮೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ತಸ್ಲಿಮಾ ಭಾನು, ಸೋಮಸಮುದ್ರ ಗ್ರಾ.ಪಂ. ಕಾರ್ಯದರ್ಶಿ ಗೋವಿಂದಪ್ಪ, ಜಿಲ್ಲಾ ಐ.ಇ.ಸಿ ಸಂಯೋಜಕ ನಟರಾಜ, ತಾಂತ್ರಿಕ ಸಂಯೋಜಕರಾದ ಮಲ್ಲಿಕಾರ್ಜುನ, ಅರುಣಾ ಜ್ಯೋತಿ, ಬಿ.ಎಫ್.ಟಿ ಹೊನ್ನುರ ಸ್ವಾಮಿ, ಗ್ರಾಮ ಕಾಯಕ ಮಿತ್ರರಾದ ಲಕ್ಷ್ಮಿ, ಶಾಂತಮ್ಮ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande