
ನವದೆಹಲಿ, ಜುಲೈ 21(ಹಿ.ಸ.)
ಆ್ಯಂಕರ್:
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಮಂಗಳವಾರ ಪ್ರಧಾನಮಂತ್ರಿಗಳ ನಿವಾಸದ ಸಮೀಪ ಧರಣಿ ನಡೆಸಿತು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಂಸದರು ಭಾಗವಹಿಸಿದರು.
ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಂಡಿರುವುದು ಪ್ರಜಾಪ್ರಭುತ್ವದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.