ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮದ ಕುರಿತು ಚರ್ಚೆಗೆ ರಾಹುಲ್ ಗಾಂಧಿ ಒತ್ತಾಯ
ನವದೆಹಲಿ, ಜುಲೈ 21(ಹಿ.ಸ.) ಆ್ಯಂಕರ್: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ವಿರೋಧ ಪಕ್ಷದ ಸಂಸದರೊಂದಿಗೆ ಭೇಟಿಯಾಗಿ, ಎನ್‌ಇಇಟಿ-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯಲ್ಲಿನ ವಿವಾದಗಳು ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ
नीट-यूजी पेपर लीक, परीक्षा संकट और छात्रों पर कथित पुलिस कार्रवाई के मुद्दे पर चर्चा की मांग को लेकर लोकसभा अध्यक्ष ओम बिरला से मुलाकात करते नेता प्रतिपक्ष राहुल गांधी और विपक्षी सांसद।


ನವದೆಹಲಿ, ಜುಲೈ 21(ಹಿ.ಸ.)

ಆ್ಯಂಕರ್:

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ವಿರೋಧ ಪಕ್ಷದ ಸಂಸದರೊಂದಿಗೆ ಭೇಟಿಯಾಗಿ, ಎನ್‌ಇಇಟಿ-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯಲ್ಲಿನ ವಿವಾದಗಳು ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ಕ್ರಮದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಒತ್ತಾಯಿಸಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಗಂಭೀರ ವಿಷಯದಲ್ಲಿ ಸರ್ಕಾರವನ್ನು ಉತ್ತರದಾಯಿತ್ವಕ್ಕೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್, ಶಿವಸೇನೆ (ಯುಬಿಟಿ) ನಾಯಕ ಅರವಿಂದ್ ಸಾವಂತ್, ಆರ್‌ಎಸ್‌ಪಿ ಸಂಸದ ಎನ್.ಕೆ. ಪ್ರೇಮಚಂದ್ರನ್ ಸೇರಿದಂತೆ ಹಲವು ವಿರೋಧ ಪಕ್ಷಗಳ ಸಂಸದರು ಸ್ಪೀಕರ್ ಅವರನ್ನು ಭೇಟಿ ಮಾಡಿದರು.

ಸಭೆಯಲ್ಲಿ ಎನ್‌ಇಇಟಿ ಮತ್ತು ಸಿಬಿಎಸ್‌ಇ ಪರೀಕ್ಷೆಗಳ ವಿವಾದಗಳು, ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಕೈಗೊಂಡ ಕ್ರಮ ಹಾಗೂ ಸರ್ಕಾರದ ಹೊಣೆಗಾರಿಕೆ ಕುರಿತು ಸದನದಲ್ಲಿ ಸಮರ್ಪಕ ಸಮಯ ಮೀಸಲಿಟ್ಟು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿದವು. ಈ ವಿಷಯಗಳ ಬಗ್ಗೆ ಕೇಂದ್ರ ಶಿಕ್ಷಣ ಸಚಿವರು ಸದನದಲ್ಲಿ ಹೇಳಿಕೆ ನೀಡಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಬೇಕೆಂದೂ ಆಗ್ರಹಿಸಲಾಯಿತು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮತ್ತು ಪರೀಕ್ಷಾ ವ್ಯವಸ್ಥೆಯ ಬಿಕ್ಕಟ್ಟಿನ ಬಗ್ಗೆ ಸಂಸತ್ತಿನಲ್ಲಿ ವಿವರವಾದ ಚರ್ಚೆ ನಡೆಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ್ದೇವೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನ್ಯಾಯಸಮ್ಮತ ಪ್ರಶ್ನೆಗಳನ್ನು ಕೇಳುತ್ತಿದ್ದರೆ, ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ ಅವರು, ದೇಶದ ಯುವಜನರ ಭವಿಷ್ಯದ ಬಗ್ಗೆ ಚರ್ಚಿಸಲು ಸಂಸತ್ತಿಗೆ ಸಾಧ್ಯವಾಗದಿದ್ದರೆ ಅದರ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಈ ವಿಷಯವನ್ನು ಕೈಬಿಡುವುದಿಲ್ಲ. ಸಂಸತ್ತಿನ ಒಳಗೂ ಹೊರಗೂ ವಿದ್ಯಾರ್ಥಿಗಳ ಧ್ವನಿಯನ್ನು ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಮಸ್ಯೆಯನ್ನು ಚರ್ಚೆಗೆ ತೆಗೆದುಕೊಳ್ಳುವಂತೆ ಸ್ಪೀಕರ್ ಅವರನ್ನು ಮನವಿ ಮಾಡಿದ್ದೇವೆ. ಆದರೆ ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ ಎಂದರು. ಇದು ದೇಶದ ವಿದ್ಯಾರ್ಥಿಗಳು ಮತ್ತು ಯುವಕರ ಭವಿಷ್ಯದ ಪ್ರಶ್ನೆಯಾಗಿದ್ದು, ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ. ಇದುವರೆಗೆ ಪ್ರಧಾನಮಂತ್ರಿಗಳು ಈ ಘಟನೆ ಕುರಿತು ಕ್ಷಮೆಯಾಚಿಸಿಲ್ಲ ಎಂದು ಆರೋಪಿಸಿದರು.

ದೇಶದ ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಅದನ್ನು ವಿರೋಧಿಸಿ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಎನ್‌ಇಇಟಿ ಮತ್ತು ಸಿಬಿಎಸ್‌ಇ ಪರೀಕ್ಷೆಗಳಲ್ಲಿನ ವಿವಾದಗಳು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರಮ ಹಾಗೂ ಸರ್ಕಾರದ ಹೊಣೆಗಾರಿಕೆ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ್ದೇವೆ ಎಂದರು. ಈ ಕುರಿತು ಕೇಂದ್ರ ಶಿಕ್ಷಣ ಸಚಿವರು ಸದನದಲ್ಲಿ ಅಧಿಕೃತ ವಿವರಣೆ ನೀಡಬೇಕು ಎಂದು ಅವರು ಆಗ್ರಹಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande