ರಾಜ್ಯದ ಹಲವೆಡೆ ಮುಂದಿನ ಏಳು ದಿನ ಮಳೆ ಮುನ್ಸೂಚನೆ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ. ಹ
ರಾಜ್ಯದ ಹಲವೆಡೆ ಮುಂದಿನ ಏಳು ದಿನ ಮಳೆ ಮುನ್ಸೂಚನೆ


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 24ರಿಂದ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಅದೇ ರೀತಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 40ರಿಂದ 50 ಕಿಲೋಮೀಟರ್ ವೇಗದ ಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande