ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಬಂಧನ: ಪ್ರಜಾಪ್ರಭುತ್ವದ ಮೇಲಿನ ದಾಳಿ: ಸಿದ್ದರಾಮಯ್ಯ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮತ್ತು ಪ್ರಧಾನಿ ನಿವಾಸದ ಬಳಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರನ್
siddaramaiah


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮತ್ತು ಪ್ರಧಾನಿ ನಿವಾಸದ ಬಳಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರನ್ನು ಪೊಲೀಸರು ಬಂಧಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿ ಕಿಡಿಕಾರಿರುವ ಅವರು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಮೊದಲು ಲಾಠಿ ಮತ್ತು ಅಶ್ರುವಾಯು ಮೂಲಕ ಉತ್ತರಿಸುತ್ತಿದ್ದ ಮೋದಿ ಸರ್ಕಾರ, ಈಗ ಸರ್ಕಾರದ ವಿರುದ್ಧ ಧ್ವನಿ ಎತ್ತಿರುವ ಜನಪ್ರತಿನಿಧಿಗಳ ಮೇಲೆ ಪೊಲೀಸರನ್ನು ಬಳಸಿ ದೌರ್ಜನ್ಯ ಎಸಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ನಿರತ ನಾಯಕರನ್ನು ತಳ್ಳಾಡಿ, ಅವರೊಂದಿಗೆ ದುರ್ವರ್ತನೆ ತೋರಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ.

ಪರೀಕ್ಷಾ ಅಕ್ರಮಗಳು ಮತ್ತು ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳ ವಿರುದ್ಧ ರಾಹುಲ್ ಗಾಂಧಿ ಅವರು ನಿರಂತರವಾಗಿ ಯುವಕರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ನಾಯಕರನ್ನು ಬಂಧಿಸುವುದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸ್ ಬಲ ಬಳಸುವುದನ್ನು ತಕ್ಷಣ ನಿಲ್ಲಿಸಬೇಕು. ಭಾರತದ ಯುವಜನತೆಗೆ ದಮನವಲ್ಲ, ನ್ಯಾಯ ಬೇಕು ಎಂದು ಆಗ್ರಹಿಸಿರುವ ಅವರು, ವಿರೋಧ ಪಕ್ಷದ ನಾಯಕರನ್ನು ಬಂಧಿಸಬಹುದೇ ಹೊರತು ಸತ್ಯವನ್ನಾಗಲಿ, ಯುವಕರ ಆಕ್ರೋಶವನ್ನಾಗಲಿ ಬಂಧಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande