
ಮೈಸೂರು, 21 ಜುಲೈ (ಹಿ.ಸ.):
ಆ್ಯಂಕರ್:
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಪಶ್ಚಿಮ ಬಂಗಾಳದಿಂದ ಕೆಲಸ ಅರಸಿ ಬಂದಿದ್ದ ಸಂತ್ರಸ್ತ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಒಂಟಿಯಾಗಿ ನಿಂತಿದ್ದ ಯುವತಿಯನ್ನು ಮೂವರು ಅಪರಾಧಿಗಳು ಅಪಹರಣ ಮಾಡಿ, ಆಕೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ವ್ಯಾಪ್ತಿಯ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ಬಂಧಿಸಿ ಈ ಕರಾಳ ಕೃತ್ಯವೆಸಗಿದ್ದಾರೆ.
ಈ ಕುರಿತು ದೂರು ದಾಖಲಾಗುತ್ತಿದ್ದಂತೆ ಟಿ. ನರಸೀಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕೇವಲ 24 ಗಂಟೆಗಳ ಒಳಗಾಗಿ ಜಾಲವನ್ನು ಭೇದಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ಕಿರಣ್, ಕಿಶೋರ್ ಹಾಗೂ ರಿಯಾನ್ ಎಂಬ ಮೂವರು ಸ್ಥಳೀಯ ಯುವಕರನ್ನು ವಶಕ್ಕೆ ಪಡೆದಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII