
ಬಳ್ಳಾರಿ, 21 ಜುಲೈ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮ, ಜಿಲ್ಲಾ ಆಸ್ಪತ್ರೆಯ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜು.22 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಮುಂಭಾಗದ ಆವರಣದಲ್ಲಿ ವಿಶ್ವ ಮೆದುಳಿನ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಡಿ.ಮಳಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.
ಜಿಲ್ಲಾ ಯೋಜನಾ ಅಭಿವೃದ್ದಿ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ್, ಜಿಲ್ಲಾ ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಮುಖ್ಯಸ್ಥರು ಮೆಡಿಸಿನ್ ವಿಭಾಗ ಡಾ.ಶ್ರೀಧರ್ ಎಮ್., ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನರರೋಗ ತಜ್ಞ ವೈದ್ಯ ಡಾ.ಕಮಲ್ ಕುಮಾರ್ ಜೈನ್, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನೋಡಲ್ ಅಧಿಕಾರಿ ಹಾಗೂ ತಜ್ಞ ವೈದ್ಯ ಡಾ.ರಾಕೇಶ್, ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕತ್ಸಾ ಕೇಂದ್ರ ವೈಧಿಕಾರಿಗಳಾದ ಡಾ.ಪ್ರಿಯಾಂಕ ಪ್ರಸಾದ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಸಣ್ಣಕೇಶವ ಸ್ವಾಗತಿಸುವರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ.ವಿ.ಪಿ ಕಾರ್ಯಕ್ರಮ ನಿರೂಪಿಸುವರು.
ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಸಿಬ್ಬಂದಿ ವರ್ಗ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್