
ಕೊಪ್ಪಳ, 23 ಜುಲೈ (ಹಿ.ಸ.)
ಆ್ಯಂಕರ್ : ಕೊಪ್ಪಳ ತಾಲೂಕಿನ ದದೇಗಲ್ನಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್.ಸಿ/ಎಸ್.ಟಿ ವರ್ಗದವರಿಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅಡಿ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಬಿ.ಇ(ಮೆಕ್ಯಾನಿಕಲ್) ಹಾಗೂ ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಿಗೆ ಸಂಬಂಧಿಸಿದ ಅಲ್ಪಾವಧಿ ತರಬೇತಿ ಕೋರ್ಸುಗಳು ಲಭ್ಯವಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೂರು ತಿಂಗಳ ಅವಧಿಯ ಪಿಸಿಬಿ ಸಾಲ್ಡ್ರಿಂಗ್, ಮೌಲ್ಡ್ ಮ್ಯಾನುಪ್ಯಾಕ್ಚರಿಂಗ್ ಟೇಕ್ನಿಷಿಯನ್, ಮೌಲ್ಡ್ ಮೆಂಟೆನೆನ್ಸ್ ಟೇಕ್ನಿಷಿಯನ್, ವೆಲ್ಡರ್/ಫಿಟ್ಟರ್, ಸಿಎನ್ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿಎನ್ಸಿ ಟರ್ನಿಂಗ್ ಮಷಿನ್ ಆಪರೇಟರ್, ಕನ್ವೆನ್ಷನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್ಸನಲ್ ಲೇಥ್ ಮಷಿನ್ ಆಪರೇಟರ್, ಸಿಎನ್ಸಿ ಪ್ರೋಗ್ರಾಮಿಂಗ್ ಮತ್ತು ಆಪರೇಶನ್, ಪ್ರೊಡಕ್ಷನ್ ಇಂಜಿನಿಯರ್ ಕ್ಯಾಡ್/ಕ್ಯಾಮ್ ಕೋರ್ಸ್ಗಳು ಹಾಗೂ ಒಂದು ವರ್ಷದ ಟೂಲ್ ರೂಮ್ ಮಷಿನಿಷ್ಟ್ ಕೋರ್ಸು ಲಭ್ಯವಿದ್ದು, ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಉಚಿತ ತರಬೇತಿಗಾಗಿ ಜುಲೈ 23 ರಿಂದ ಜುಲೈ 31 ರೊಳಗಾಗಿ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಯೋಜನೆಯ ಅನುಸಾರ ಪ್ರಮಾಣ ಪತ್ರ ನೀಡಲಾಗುವುದು ಮತ್ತು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅಡಿಯಲ್ಲಿ ತರಬೇತಿ ಹೊಂದುವ ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಸಹ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಪ್ರಾಂಶುಪಾಲರು, ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ- ಗದಗ ರೋಡ್-ದದೇಗಲ್ ಕೊಪ್ಪಳ, ಮೊ.ಸಂ.: 7507094445 ಗೆ ಸಂಪರ್ಕಿಸಬಹುದು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್