
ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ ವಿಡಿಯೋ ಹಂಚಿಕೊಂಡಿದ್ದ ಹಡ್ಸನ್ ಎಂಬ ಯುವಕನನ್ನು ಬಾಣಾಸವಾಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಹಡ್ಸನ್ ಪ್ರಧಾನಿ ಮೋದಿ ವಿರುದ್ಧ ಅತ್ಯಂತ ಕೀಳು ಮಟ್ಟದ ಅವಾಚ್ಯ ಪದಗಳನ್ನು ಬಳಸಿ ವಿಡಿಯೋ ನಿರ್ಮಿಸಿದ್ದನು. ಈ ವಿಡಿಯೋ ಅಂತರ್ಜಾಲದಲ್ಲಿ ಭಾರೀ ವೈರಲ್ ಆಗಿತ್ತು.
ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸರ್ವಜ್ಞನಗರ ಬಿಜೆಪಿ ಮಂಡಲದ ಮುಖಂಡರು, ಬಾಣಾಸವಾಡಿ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದರು.
ದೂರಿನ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡರು. ಸದ್ಯ ಆರೋಪಿ ಹಡ್ಸನ್ನನ್ನು ವಶಕ್ಕೆ ಪಡೆದಿರುವ ಬಾಣಾಸವಾಡಿ ಪೊಲೀಸರು, ಈ ಕೃತ್ಯದ ಹಿಂದೆ ಬೇರೆ ಯಾರದ್ದಾದರೂ ಪ್ರಚೋದನೆ ಇದೆಯೇ ಎಂಬುದರ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII