(ಪರಿಷ್ಕೃತ) ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ;ರಾಜ್ಯಪಾಲರಿಗೆ ದೂರು
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ಆ್ಯಂಕರ್:ಬಿಜೆಪಿ ಶಾಸಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಪ್ರತಿ ಪಕ್ಷದ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾ
(ಪರಿಷ್ಕೃತ) ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ;ರಾಜ್ಯಪಾಲರಿಗೆ ದೂರು


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ಆ್ಯಂಕರ್:ಬಿಜೆಪಿ ಶಾಸಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಪ್ರತಿ ಪಕ್ಷದ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಈ ಧರಣಿ ನಡೆಯಿತು. ಕೆಪಿಸಿಸಿ ಕಚೇರಿ ಬಳಿ ಶಾಂತಿಯುತ ಪ್ರತಿಭಟನೆಗೆ ಯತ್ನಿಸಿದ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ನಾಯಕರು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೂಂಡಾ ಸಂಸ್ಕೃತಿ ಮರುಕಳಿಸುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು. ಪ್ರತಿಭಟನೆಯ ಬಳಿಕ ಬಿಜೆಪಿ ಉನ್ನತ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ಮನವಿ ಸಲ್ಲಿಸಿ, ಜನಪ್ರತಿನಿಧಿಗಳಿಗೇ ರಕ್ಷಣೆ ಇಲ್ಲದಂತಾಗಿದ್ದು, ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande