ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿರುಗೇಟು
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್:ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ನಡೆಸುತ್ತಿರುವ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ನಾಯಕರು ಬಳಸುತ್ತಿರುವ ಭಾಷೆ ಮತ್ತು ರಾಜಕೀಯ ಸಂಸ್ಕೃತಿ ಪ್ರಜಾಪ್ರಭುತ್ವಕ್ಕ
BKH file photo


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ನಡೆಸುತ್ತಿರುವ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ನಾಯಕರು ಬಳಸುತ್ತಿರುವ ಭಾಷೆ ಮತ್ತು ರಾಜಕೀಯ ಸಂಸ್ಕೃತಿ ಪ್ರಜಾಪ್ರಭುತ್ವಕ್ಕೆ ಶೋಭೆ ತರುವಂತದ್ದಲ್ಲ ಎಂದು ಅವರು ಆರೋಪಿಸಿದರು.

ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ ಎಂದರು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರ ಭಾಷೆ ಹಾಗೂ ರಾಜಕೀಯ ನಡೆ ಸಮಾಜದಲ್ಲಿ ದ್ವೇಷದ ವಾತಾವರಣ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರು ಕಾಂಗ್ರೆಸ್ ಅನ್ನು ಟೀಕಿಸುವ ಮೊದಲು ತಮ್ಮ ಪಕ್ಷದ ಕಚೇರಿಗಳಲ್ಲಿ ವಿವಿಧ ರಾಜ್ಯಗಳಲ್ಲಿ ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳ ಪ್ರಕರಣಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ತ್ರಿವರ್ಣ ಧ್ವಜ ಮತ್ತು ಗಾಂಧಿ ಟೋಪಿ ಮಾತ್ರ ಸಿಗುತ್ತದೆ, ಮಾರಕಾಸ್ತ್ರಗಳು ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದ ಹರಿಪ್ರಸಾದ್, ದೆಹಲಿಯಲ್ಲಿ ನೀಟ್ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದ ಅವರು, ದೇಶದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರದ ವೈಫಲ್ಯ ಎಂದು ಟೀಕಿಸಿದರು.

ನೀಟ್ ವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ಹಾನಿಗೊಳಗಾಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿಇಟಿ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿರಲಿಲ್ಲ ಎಂದು ಹೇಳಿದರು. ವೀರಪ್ಪ ಮೊಯ್ಲಿ ಅವರು ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಇಟಿ ವ್ಯವಸ್ಥೆ ಜಾರಿಗೆ ತಂದಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್ ಕಚೇರಿಯ ಮೇಲೆ ದಾಳಿ ಮಾಡಲು ಯತ್ನಿಸಿದರೆ ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಹರಿಪ್ರಸಾದ್, ಬಿಜೆಪಿ ನಾಯಕರು ವಿಷಯಾಂತರ ಮಾಡಲು ವೈಯಕ್ತಿಕ ಟೀಕೆಗಳಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಮಾತನಾಡಿ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರನ್ನು ಟೀಕಿಸಿದರು. ಸರ್ಕಾರಿ ಸೇವೆಗೆ ಅರ್ಹತೆಯೇ ಇಲ್ಲದವರು ಇಂದು ರಾಜಕೀಯದಲ್ಲಿ ಇಂತಹ ಭಾಷೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪ್ರಧಾನಿ ಅವರನ್ನು ಮೆಚ್ಚಿಸಲು ಕೆಲವರು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande