
ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ, ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿಯಾಗಿರುವ ಮದನ್ ಮೋಹನ್.ಸಿ ಅವರನ್ನು ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಇವರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಆಡಳಿತಾಧಿಕಾರಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಈ ಹೊಸ ಹುದ್ದೆಗೆ ನಿಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್ ಅವರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII