
ಕೊಪ್ಪಳ, 23 ಜುಲೈ (ಹಿ.ಸ.)
ಆ್ಯಂಕರ್ : 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಹತ್ತಿ (ನೀರಾವರಿ) ಬೆಳೆಗೆ ನೋಂದಣಿ ಮಾಡಲು ಬೆಳೆ ಸಾಲ ಪಡೆದ ರೈತರಿಗೆ ಮಾತ್ರ ಜುಲೈ 26 ಕೊನೆ ದಿನಾಂಕವಾಗಿರುತ್ತದೆ. ಉಳಿದಂತೆ ಭತ್ತ (ಮಳೆ ಆಶ್ರಿತ / ನೀರಾವರಿ), ಜೋಳ (ಮಳೆ ಆಶ್ರಿತ / ನೀರಾವರಿ), ಮುಸುಕಿನಜೋಳ (ಮಳೆ ಆಶ್ರಿತ / ನೀರಾವರಿ), ಸಜ್ಜೆ (ಮಳೆ ಆಶ್ರಿತ / ನೀರಾವರಿ), ಸೂರ್ಯಕಾಂತಿ (ಮಳೆ ಆಶ್ರಿತ / ನೀರಾವರಿ), ಅಲಸಂದೆ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ / ನೀರಾವರಿ), ಹುರುಳಿ (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ನೆಲಗಡಲೆ (ಶೇಂಗಾ) (ಮಳೆ ಆಶ್ರಿತ / ನೀರಾವರಿ), ಹತ್ತಿ (ಮಳೆ ಆಶ್ರಿತ ), ಈರುಳ್ಳಿ (ನೀರಾವರಿ / ಮಳೆ ಆಶ್ರಿತ), ಟೊಮ್ಯಾಟೊ ಬೆಳೆಗಳಿಗೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.
ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ರೈತರು ಯೋಜನೆಯ ಸದುಪಯೋಗ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್