ಜಂತರ್ ಮಂತರ್ ಘಟನೆ ವಿರೋಧಿಸಿ ಕೋಲಾರದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ಜಂತರ್ ಮಂತರ್ ಘಟನೆ ವಿರೋಧಿಸಿ ಕೋಲಾರದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿರೋಧಿಸಿ ಕೋಲಾರದಲ್ಲಿ ವಿವಿಧ ಸಂಘಟನೆಗಳಿ0ದ ಪ್ರತಿಭಟನೆ ನಡೆಸಲಾಯಿತು.


ಕೋಲಾರ, ೨೩ ಜುಲೈ (ಹಿ.ಸ):

ಆ್ಯಂಕರ್ : ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿ ನಗರದ ಮೆಕ್ಕೆ ವೃತ್ತದಲ್ಲಿ ಗುರುವಾರ ಎನ್ಎಸ್ಯುಐ, ಎಸ್ಎಫ್ಐ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ನಚಿಕೇತನ ನಿಲಯದಿಂದ ಕಾರ್ಯಕರ್ತರು ಪದಾಧಿಕಾರಿಗಳು ಹಾಗೂ ವಿಧ್ಯಾರ್ಥಿಗಳು ಮೆಕ್ಕೆ ವೃತ್ತದವರೆಗೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸರ್ಕಾರದ ಕ್ರಮದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಮುಖಂಡರಾದ ವಿ.ಗೀತಾ ಮಾತನಾಡಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ವಿವಿಧ ಪಕ್ಷಗಳ ನಾಯಕರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಈ ಘಟನೆಯ ಸಂಪೂರ್ಣ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಎನ್ಎಸ್ಯುಐ ಅಧ್ಯಕ್ಷ ನಿಹಾಲ್ ತರೀನ್ ಮಾತನಾಡಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ನಂತರದಿAದ ಹಂತಹAತವಾಗಿ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಇಂತಹ ಪ್ರಯತ್ನಗಳು ಪ್ರಜಾಪ್ರಭುತ್ವದ ವ್ಯವಸ್ಥೆಗೆ ವಿರುದ್ಧವಾಗಿದೆ ವಿಧ್ಯಾರ್ಥಿಗಳು ಬೇಡಿಕೆಗಳು ಈಡೇರುವವರೆಗೆ ದೇಶಾದ್ಯಂತ ಉಗ್ರವಾದ ಹೋರಾಟ ಮುಂದುವರಿಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ ಮಾತನಾಡಿ ಬಿಜೆಪಿ ಪಕ್ಷದ ಏಜೆಂಟ್ ರೀತಿಯಲ್ಲಿ ದೆಹಲಿ ಪೋಲೀಸರು ವರ್ತಿಸಿದ್ದಾರೆ ವಿಧ್ಯಾರ್ಥಿಗಳ ಬಗ್ಗೆ ಕಾಳಜಿ ಗೌರವ ಇದ್ದರೆ ಕೇಂದ್ರ ಶಿಕ್ಷಣ ಮಂತ್ರಿ ರಾಜೀನಾಮೆ ನೀಡಬೇಕು ವಿಧ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವ ಜೊತೆಗೆ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್ ಶ್ರೀರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಪ್ಸರ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಎಸ್ಎಫ್ಐ ಮುಖಂಡರಾದ ಸುರೇಶ್ ಬಾಬು, ಸುದರ್ಶನ್, ಎನ್ಎಸ್ಐಯು ಮುಖಂಡರಾದ ಸುಹೈಲ್, ಹರಿ, ಸೂರಿ, ಸುಲೇಮಾನ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande