


ಬಳ್ಳಾರಿ, 23 ಜುಲೈ (ಹಿ.ಸ.)
ಆ್ಯಂಕರ್ : ವಿದ್ಯಾರ್ಥಿಗಳು ಉನ್ನತ ಗುರಿ ಸಾಧಿಸಿ ದೇಶ ಸೇವೆ ಮಾಡಲಿ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ ಅವರು ಕರೆ ನೀಡಿದ್ದಾರೆ.
ಬಳ್ಳಾರಿ ಸೇವಾ ಸಮಿತಿಯು ಕಪ್ಪಗಲ್ಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಲಿಕಾ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ಹಂಚಿಕೆ ಮಾಡಿ, ಅವರು ಮಾತನಾಡಿದರು.
ವಿದ್ಯಾರ್ಥಿಗಳು ದಾನಿಗಳ ದಾನಗಳನ್ನು ಸ್ವೀಕರಿಸಿ, ಉತ್ತಮವಾಗಿ ವಿದ್ಯೆಯನ್ನು ಕಲಿತು ದೊಡ್ಡ ದೊಡ್ಡ ಕನಸುಗಳನ್ನು ಕಂಡು ಖ್ಯಾತ ವ್ಯಕ್ತಿಗಳಾಗಿ ಬೆಳೆಯಬೇಕು. ಈ ಮೂಲಕ ಸಮಾಜ ಸೇವೆ, ದೇಶ ಸೇವೆಯನ್ನು ನಡೆಸಿ, ಖ್ಯಾತನಾಮರಾಗಬೇಕು ಎಂದು ಹೇಳಿದರು.
150 ವಿದ್ಯಾರ್ಥಿಗಳಿಗೆ ಪೆನ್ನು, ಪೆನ್ಸಿಲ್, ನೋಟ್ ಪುಸ್ತಕ, ಶಾಲಾ ಬ್ಯಾಗ್, ಕಂಪಾಸ್ ಬಾಕ್ಸ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ಬಳ್ಳಾರಿ ಸೇವಾ ಸಮಿತಿಯು ಉಚಿತವಾಗಿ ವಿತರಿಸಿತು.
ಬಳ್ಳಾರಿ ಸೇವಾ ಸಮಿತಿಯ ಅಧ್ಯಕ್ಷರಾದ ಬಿ. ಸುರೇಂದ್ರ ಕುಮಾರ್ ಭಾಫ್ನಾ, ಕಾರ್ಯದರ್ಶಿ ವಿ. ರಾಮಚಂದ್ರ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಜಯಪ್ರಕಾಶ್ ಗುಪ್ತ, ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ, ಬಸವೇಶ್ವರ ಕ್ಯಾಂಪ್, ಕಪ್ಪಗಲ್ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶಿವಕುಮಾರ್, ವಿಜಯಕುಮಾರ್, ಬಳ್ಳಾರಿ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್