ಕರ್ನಾಟಕ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಡಿ ಕೆ ಶಿವಕುಮಾರ್
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ಕರ್ನಾಟಕವು ಪ್ರತಿಭಾನ್ವಿತ ಮಾನವ ಸಂಪನ್ಮೂಲದ ಪ್ರಮುಖ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಹವಾಮಾನ ಮತ್ತು ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳು ಸಾಟಿಯಲ್ಲ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ತುಮಕೂರು
dk-shivakumar


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ಕರ್ನಾಟಕವು ಪ್ರತಿಭಾನ್ವಿತ ಮಾನವ ಸಂಪನ್ಮೂಲದ ಪ್ರಮುಖ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಹವಾಮಾನ ಮತ್ತು ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳು ಸಾಟಿಯಲ್ಲ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತುಸಂಗ್ರಹ ಕೇಂದ್ರದಲ್ಲಿ ನಡೆದ ರಕ್ಷಣೆ ಹಾಗೂ ಏರೋಸ್ಪೇಸ್ ಕ್ಷೇತ್ರದ 15ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ ಸಮಿಟ್ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರತಿ ವರ್ಷ 250ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳಿಂದ 1 ಲಕ್ಷಕ್ಕೂ ಅಧಿಕ ಇಂಜಿನಿಯರ್ಗಳು ಹೊರಬರುತ್ತಿದ್ದಾರೆ. ಜವಹರಲಾಲ್ ನೆಹರೂ ಅವರ ದೂರದೃಷ್ಟಿಯಿಂದ ಬೆಂಗಳೂರಿನಲ್ಲಿ ಹೆಚ್ಎಎಲ್, ಇಸ್ರೋ, ಐಐಎಸ್ಸಿಯಂತಹ ಪ್ರಮುಖ ಸಾರ್ವಜನಿಕ ಸಂಸ್ಥೆಗಳು ತಲೆಎತ್ತಿದ್ದು, ಇಂದು ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಹಾಗೂ ರಕ್ಷಣಾ ವಲಯದಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ದೇಶದ ಭದ್ರತಾ ವಲಯದಲ್ಲಿ ಉದ್ಯಮಿಗಳ ಪಾತ್ರ ಮಹತ್ವದ್ದಾಗಿದ್ದು, ನಾವೆಲ್ಲರೂ ಒಗ್ಗಟ್ಟಾಗಿ ದೇಶದ ಪ್ರಗತಿಗಾಗಿ ಶ್ರಮಿಸಬೇಕು. ತಂತ್ರಜ್ಞಾನ, ಸಂಶೋಧನೆ ಹಾಗೂ ನಾವಿನ್ಯತೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ 900ಕ್ಕೂ ಅಧಿಕ ಜಾಗತಿಕ ಸಾಮರ್ಥ್ಯ ಕೇಂದ್ರಗಳಿವೆ. ಅಮೆರಿಕ ಹೊರತುಪಡಿಸಿದರೆ ಗೂಗಲ್ನ ಅತಿ ದೊಡ್ಡ ಕ್ಯಾಂಪಸ್ ಬೆಂಗಳೂರಿನಲ್ಲೇ ಇದೆ ಎಂದರು.

ಉದ್ಯಮಿಗಳ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದ್ದು, ಎಲ್ಲರ ಸಹಕಾರದಿಂದ ನಾವೆಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಸೋಣ ಎಂದು ಡಿ ಕೆ ಶಿವಕುಮಾರ್ ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande