
ನವದೆಹಲಿ, ಜುಲೈ 25(ಹಿ.ಸ.):
ಆ್ಯಂಕರ್:
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೇರಿದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪ್ರಮುಖವಾಗಿ ಆಗ್ರಹಿಸಿದ್ದರು.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್, ಜಂತರ್-ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ರಾಷ್ಟ್ರವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು. ದೇಶದ ಏಕತೆ ಕಾಪಾಡಬೇಕು. ಭಾರತದ ಯಾವುದೇ ವಿದ್ಯಾರ್ಥಿಯ ಭವಿಷ್ಯ ಕಾನೂನು ಪ್ರಕ್ರಿಯೆಗಳಲ್ಲಿ ಸಿಲುಕಬಾರದು. ವಿದ್ಯಾರ್ಥಿಗಳು ತಮ್ಮ ಸಮಯವನ್ನು ಓದು ಹಾಗೂ ಭವಿಷ್ಯ ನಿರ್ಮಾಣಕ್ಕೆ ಮೀಸಲಿಡಬೇಕು ಎಂಬ ಉದ್ದೇಶದಿಂದ ಗೌರವಾನ್ವಿತ ಪ್ರಧಾನಮಂತ್ರಿಗೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.