ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ
ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಬಗ್ಗೆ ಶನಿವಾರ ಎ.ಐ.ಸಿ.ಸಿ. ಕಾರ್ಯದರ್ಶಿ ರಾಧಕೃಷ್ಣನ್ ಓಜಾ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.


ಕೋಲಾರ, ೨೫ ಜುಲೈ (ಹಿ.ಸ):

ಆ್ಯಂಕರ್ : ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು ಪಕ್ಷದ ಯುವಕರು ಮಹಿಳೆಯರು ಹಿರಿಯ ಮುಖಂಡರು ಜನಪ್ರತಿನಿಧಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ವರದಿ ಸಿದ್ಧಪಡಿಸಿ ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ವೀಕ್ಷಕ ರಾಧಾಕೃಷ್ಣನ್ ಓಜಾ ತಿಳಿಸಿದರು.

ಕೋಲಾರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಮುಖಂಡರ ಅಭಿಪ್ರಾಯಗಳನ್ನು ಪಡೆದು ಸಮರ್ಥ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ಜಿಲ್ಲಾ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಆಯ್ಕೆಯಾದ ಅಧ್ಯಕ್ಷರಿಗೆ ಅಗತ್ಯ ತರಬೇತಿ ನೀಡಿ ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಸಜ್ಜುಗೊಳಿಸಲಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದೀಗ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಂಘಟನ್ ಸೃಜನ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಕೆಪಿಸಿಸಿ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದರು.

ಜಿಲ್ಲಾವಾರು ಹಾಗೂ ವಿಧಾನಸಭಾ ಕ್ಷೇತ್ರವಾರು ಪ್ರಮುಖ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗುವುದು. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿ, ಅವುಗಳನ್ನು ಪರಿಶೀಲಿಸಿದ ವರದಿಯೊಂದಿಗೆ ಎಐಸಿಸಿಗೆ ಸಲ್ಲಿಸಲಾಗುವುದು. ಪಕ್ಷಕ್ಕೆ ಸಮರ್ಥ ನಾಯಕತ್ವ ರೂಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಎನ್ ಸಂಪAಗಿ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ವರ್, ವೆಂಕಟೇಶಲು ಕಾರ್ಯಕ್ರಮದ ಸಹ ಸಂಯೋಜಕಿ ಯೋಗೇಶ್ವರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷರಾದ ಮ್ಯಾಕಲ ನಾರಾಯಣಸ್ವಾಮಿ, ಊರಬಾಗಿಲು ಶ್ರೀನಿವಾಸ್, ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಟಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್, ಓಬಿಸಿ ರಾಜ್ಯ ಉಪಾಧ್ಯಕ್ಷ ಒಬಿಸಿ ಮಂಜುನಾಥ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande