ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ನ್ಯಾಯ: ಡಿ.ಕೆ. ಶಿವಕುಮಾರ್
ಬೆಂಗಳೂರು, 25 ಜುಲೈ (ಹಿ.ಸ.): ಆ್ಯಂಕರ್:ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೇಶದ ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಲ್ಲಿ ಹೊಣೆಗಾರಿಕೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂಬ ಸತ್ಯವನ್ನು ತಡವಾದರೂ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಡಿ.
Cm


ಬೆಂಗಳೂರು, 25 ಜುಲೈ (ಹಿ.ಸ.):

ಆ್ಯಂಕರ್:ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೇಶದ ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಲ್ಲಿ ಹೊಣೆಗಾರಿಕೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂಬ ಸತ್ಯವನ್ನು ತಡವಾದರೂ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇಂದಿನ ದಿನ ಭಾರತ ದೇಶದ ವಿದ್ಯಾರ್ಥಿಗಳಿಗೆ ಸೇರಿದ್ದು. ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ವಿದ್ಯಾರ್ಥಿಗಳ ಭವಿಷ್ಯ ಪಣಕ್ಕಿದ್ದಾಗ ಹೊಣೆಗಾರಿಕೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂಬುದನ್ನು ತಡವಾಗಿ ಆದರೂ ಒಪ್ಪಿಕೊಂಡಿರುವ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ನ್ಯಾಯಕ್ಕಾಗಿ ಧೈರ್ಯ ಮತ್ತು ದೃಢ ಸಂಕಲ್ಪದೊಂದಿಗೆ ನಿರಂತರವಾಗಿ ಹೋರಾಡಿದ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಈ ಕ್ಷಣ ಸೇರಿದೆ. ತಮ್ಮ ಹಕ್ಕುಗಳಿಗಾಗಿ ಆಶಾಭಾವನೆ ಕಳೆದುಕೊಳ್ಳದೆ ಹೋರಾಟ ಮುಂದುವರಿಸಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ನನ್ನ ನಮನಗಳು ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಪರವಾಗಿ ಆರಂಭದಿಂದಲೂ ಅಚಲವಾಗಿ ನಿಂತಿದ್ದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಲ್ಲ ವಿರೋಧ ಪಕ್ಷದ ನಾಯಕರಿಗೂ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ.

ಆದರೆ ನಮ್ಮ ಜವಾಬ್ದಾರಿ ಇಲ್ಲಿಗೆ ಮುಗಿಯುವುದಿಲ್ಲ. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು, ಆಶಯ ಮತ್ತು ಭವಿಷ್ಯಕ್ಕೆ ನ್ಯಾಯ ಒದಗಿಸುವಂತಹ ನ್ಯಾಯಸಮ್ಮತ, ಪಾರದರ್ಶಕ ಹಾಗೂ ವಿಶ್ವಾಸಾರ್ಹ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಮುಂದಿನ ಕರ್ತವ್ಯವಾಗಿದೆ. ವಿದ್ಯಾರ್ಥಿಗಳ ನಂಬಿಕೆಗೆ ತಕ್ಕ ಶಿಕ್ಷಣ ವ್ಯವಸ್ಥೆ ರೂಪಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande