ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ; ಪ್ರಹ್ಲಾದ್ ಜೋಶಿಗೆ ಹೆಚ್ಚುವರಿಯಾಗಿ ಶಿಕ್ಷಣ ಖಾತೆ
ನವದೆಹಲಿ, 25 ಜುಲೈ (ಹಿ.ಸ.): ಆ್ಯಂಕರ್:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಪ್ರಹ್ಲಾದ
ಪ್ರಹ್ಲಾದ ಜೋಶಿ ಸಂಗ್ರಹ ಚಿತ್ರ


ನವದೆಹಲಿ, 25 ಜುಲೈ (ಹಿ.ಸ.):

ಆ್ಯಂಕರ್:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ.

ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿದ್ದಾರೆ. ಈಗಾಗಲೇ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ತಮ್ಮ ಹಾಲಿ ಖಾತೆಗಳ ಜೊತೆಗೆ ಶಿಕ್ಷಣ ಇಲಾಖೆಯ ಕಾರ್ಯಭಾರವನ್ನೂ ನಿರ್ವಹಿಸಲಿದ್ದಾರೆ.

ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಅವರು, ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಧಾನಿ ಸೂಚನೆಯಂತೆ ಅವರು ತಕ್ಷಣದಿಂದಲೇ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande