ಬಾಗಲಕೋಟೆ: ಕಾರು ಏಕಾಏಕಿ ಸ್ಫೋಟ; ಯಾವುದೇ ಪ್ರಾಣಹಾನಿ ಇಲ್ಲ
ಬಾಗಲಕೋಟೆ, 26 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಭಾಗದಲ್ಲಿರುವ ಬಾರ್ವೊಂದರ ಎದುರು ನಿಲ್ಲಿಸಲಾಗಿದ್ದ ಕಾರೊಂದು ಏಕಾಏಕಿ ಸ್ಫೋಟಗೊಂಡು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ಹನಮಂತ ಎಂಬುವವರಿಗೆ ಸೇರಿದ ಕಾರು ಬಾರ್ ಎದುರ
ಸ್ಪಾಟ್


ಬಾಗಲಕೋಟೆ, 26 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಭಾಗದಲ್ಲಿರುವ ಬಾರ್ವೊಂದರ ಎದುರು ನಿಲ್ಲಿಸಲಾಗಿದ್ದ ಕಾರೊಂದು ಏಕಾಏಕಿ ಸ್ಫೋಟಗೊಂಡು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.

ಹನಮಂತ ಎಂಬುವವರಿಗೆ ಸೇರಿದ ಕಾರು ಬಾರ್ ಎದುರು ನಿಲ್ಲಿಸಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಏಕಾಏಕಿ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ಸಾರ್ವಜನಿಕರು ಬೆಚ್ಚಿಬಿದ್ದು ಕೆಲಕಾಲ ಆತಂಕಕ್ಕೊಳಗಾದರು. ಸ್ಫೋಟದ ಬಳಿಕ ಕಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ವಾಹನ ಬಹುತೇಕ ಸಂಪೂರ್ಣ ಹಾನಿಗೊಳಗಾಗಿದೆ.

ಘಟನೆ ವೇಳೆ ವಾಹನದೊಳಗೆ ಯಾರೂ ಇರದ ಕಾರಣ ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ. ಇಲ್ಲದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷ, ಇಂಧನ ಸೋರಿಕೆ ಅಥವಾ ಇತರೆ ಕಾರಣಗಳಿಂದ ಘಟನೆ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ಧರ್ಥ ಗೋಯಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಘಟನೆಯ ವಿಡಿಯೊ ಹಾಗೂ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ತನಿಖೆ ಪೂರ್ಣಗೊಂಡ ಬಳಿಕವೇ ಸ್ಫೋಟಕ್ಕೆ ನಿಖರ ಕಾರಣ ಬಹಿರಂಗವಾಗಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande