೧ ಕೋಟಿ ವೆಚ್ಚದಲ್ಲಿ ಗಣಿಹಾರ ತಾಂಡಾ–ಕೋರಹಳ್ಳಿ ರಸ್ತೆ ಅಭಿವೃದ್ಧಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
ವಿಜಯಪುರ, 26 ಜುಲೈ (ಹಿ.ಸ.) ಆ್ಯಂಕರ್ : ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಅದರ ಭಾಗವಾಗಿ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯತ್, ಪಂಚಾಯತ್ ರಾಜ್ ಇಲಾಖೆ ಉಪವಿಭಾಗ ಸಿಂದಗಿ ವತಿಯಿಂದ ಸುಮಾರು ₹೧ಕೋಟಿ ವೆಚ್
ಪೂಜೆ


ವಿಜಯಪುರ, 26 ಜುಲೈ (ಹಿ.ಸ.)

ಆ್ಯಂಕರ್ : ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಅದರ ಭಾಗವಾಗಿ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯತ್, ಪಂಚಾಯತ್ ರಾಜ್ ಇಲಾಖೆ ಉಪವಿಭಾಗ ಸಿಂದಗಿ ವತಿಯಿಂದ ಸುಮಾರು ₹೧ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಂದಗಿ ಕ್ಷೇತ್ರದ ಗಣಿಹಾರ ತಾಂಡಾದಿಂದ ಕೋರಹಳ್ಳಿ ಸಂಪರ್ಕ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕರಾದ ಅಶೋಕ ಮನಗೂಳಿ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ರಸ್ತೆ ಅಭಿವೃದ್ಧಿಯು ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಹೇಳಿದರು. ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಗಳ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಲಿದ್ದು, ಜನರ ಜೀವನಮಟ್ಟ ಸುಧಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ರಸ್ತೆ, ಸೇತುವೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗಣಿಹಾರ ತಾಂಡಾ–ಕೋರಹಳ್ಳಿ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರಿಗೆ ಸುಗಮ ಸಂಚಾರದ ವ್ಯವಸ್ಥೆ ದೊರೆಯಲಿದ್ದು, ಕೃಷಿ ಉತ್ಪನ್ನಗಳ ಸಾಗಣೆಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಊರಿನ ಮುಖಂಡರು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande