
ಬೆಂಗಳೂರು, 26 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ವಿವಿಧ ಬಾಕಿ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಸೋಮವಾರ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿಯನ್ನು ಎದುರಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದ್ದು, ಈ ಸಂಕಷ್ಟದ ಸಮಯದಲ್ಲಾದರೂ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.
ಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರೂ ಭಾಗವಹಿಸಲಿದ್ದು, ಬರ ಪರಿಹಾರ, ಬಾಕಿ ಇರುವ ಯೋಜನೆಗಳು ಹಾಗೂ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೇಂದ್ರದ ಮುಂದೆ ಬಲವಾದ ಧ್ವನಿ ಎತ್ತಲಾಗುವುದು ಎಂದು ತಿಳಿಸಿದರು.
ಆಗಸ್ಟ್ 13ರಿಂದ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.