ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಪ್ರಹ್ಲಾದ್ ಜೋಶಿ
ನವದೆಹಲಿ, ಜುಲೈ 26(ಹಿ.ಸ.): ಆ್ಯಂಕರ್:ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಪ್ರಹ್ಲಾದ್ ಜೋಶಿ ಸಚಿವಾಲಯದ ಕಾರ್ಯಗಳ ಪರಿಶೀಲನೆ ಆರಂಭಿಸಿದ್ದಾರೆ. ಭಾನುವಾರ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮೊದಲ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ, ಪ್ರಮುಖ ಯೋಜನೆಗಳು, ಬಾಕಿ ಇರುವ
केंद्रीय शिक्षा मंत्री प्रह्लाद जोशी  रविवार को  अधिकारियों के साथ बैठक करते हुए


ನವದೆಹಲಿ, ಜುಲೈ 26(ಹಿ.ಸ.):

ಆ್ಯಂಕರ್:ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಪ್ರಹ್ಲಾದ್ ಜೋಶಿ ಸಚಿವಾಲಯದ ಕಾರ್ಯಗಳ ಪರಿಶೀಲನೆ ಆರಂಭಿಸಿದ್ದಾರೆ. ಭಾನುವಾರ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮೊದಲ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ, ಪ್ರಮುಖ ಯೋಜನೆಗಳು, ಬಾಕಿ ಇರುವ ವಿಷಯಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಹ್ಲಾದ್ ಜೋಶಿ ಅವರನ್ನು ಹೊಸ ಶಿಕ್ಷಣ ಸಚಿವರಾಗಿ ನೇಮಿಸಿತ್ತು.

ಈ ಮೊದಲು ಪ್ರಹ್ಲಾದ್ ಜೋಶಿ ಅವರು ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವಾಲಯ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. 2024ರ ಲೋಕಸಭೆ ಚುನಾವಣೆಯ ಬಳಿಕ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದರು.

ಈಗ ಶಿಕ್ಷಣ ಸಚಿವಾಲಯದ ಹೊಣೆ ಹೊತ್ತ ಮೊದಲ ದಿನವೇ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದು, ಶಿಕ್ಷಣ ಕ್ಷೇತ್ರದ ಪ್ರಮುಖ ಯೋಜನೆಗಳು ಮತ್ತು ನೀತಿಗಳ ಅನುಷ್ಠಾನಕ್ಕೆ ವೇಗ ನೀಡುವತ್ತ ಸರ್ಕಾರ ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande