ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ: ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ
ನವದೆಹಲಿ, ಜುಲೈ 26(ಹಿ.ಸ.): ಆ್ಯಂಕರ್:ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ನಡೆದಿತ್ತೆಂದು ಆರೋಪಿಸಲಾಗಿರುವ ಬಲಪ್ರಯೋಗ ಕುರಿತು ಉತ್ತರ ನೀಡುವಂತೆ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್
लोकसभा में नेता प्रतिपक्ष राहुल गांधी (फाइल फोटो)


ನವದೆಹಲಿ, ಜುಲೈ 26(ಹಿ.ಸ.):

ಆ್ಯಂಕರ್:ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ನಡೆದಿತ್ತೆಂದು ಆರೋಪಿಸಲಾಗಿರುವ ಬಲಪ್ರಯೋಗ ಕುರಿತು ಉತ್ತರ ನೀಡುವಂತೆ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ನ್ಯಾಯಸಮ್ಮತ ಮತ್ತು ಉತ್ತರದಾಯಿತ್ವ ಹೊಂದಿರುವ ಶಿಕ್ಷಣ ವ್ಯವಸ್ಥೆಯನ್ನು ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದರು. ಆದರೆ ಅವರ ಮಾತು ಕೇಳುವ ಬದಲು ಭದ್ರತಾ ಪಡೆಗಳು ಅಶ್ರುವಾಯು ಹಾಗೂ ಮಾರಕ ಶಸ್ತ್ರಾಸ್ತ್ರಗಳನ್ನು ಬಳಸಿ ಬಲಪ್ರಯೋಗ ನಡೆಸಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಬಳಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಅವರು, ಪೆಲೆಟ್ ದಾಳಿಯಿಂದ ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಅಪಾಯದಲ್ಲಿರುವ ಸಾಹಿಲ್ ಲೋಚ್ ಎಂಬ 19 ವರ್ಷದ ವಿದ್ಯಾರ್ಥಿಯನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.

ಗೃಹ ಸಚಿವರಾಗಿ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಸೇರಿದಂತೆ ಮಾರಕ ಬಲಪ್ರಯೋಗಕ್ಕೆ ಅನುಮತಿ ನೀಡಿದ್ದೀರಾ? ಇಲ್ಲದಿದ್ದರೆ ಅದಕ್ಕೆ ಅನುಮತಿ ನೀಡಿದ್ದು ಯಾರು? ಸಾಮಾನ್ಯ ಉಡುಪಿನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದವರು ಪೊಲೀಸರು ಅಥವಾ ಸ್ವಯಂಸೇವಕರೇ? ಅವರ ನಿಯೋಜನೆಗೆ ಅನುಮತಿ ನೀಡಿದ್ದು ಯಾರು? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ಅತ್ಯಗತ್ಯವಾಗಿದ್ದು, ಪ್ರತಿಭಟನಾಕಾರರ ಸುರಕ್ಷತೆ ಕಾಪಾಡಿ ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಹೊಣೆಗಾರಿಕೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande