ಜುನ್ನೂರ ಕಾಂಗ್ರೆಸ್ ಮುಖಂಡ ದುಂಡಪ್ಪ ಕೆಂಚಣ್ಣವರ ನಿಧನ: ಕುಟುಂಬದ ಅಂಗಾಂಗ ದಾನ ನಿರ್ಧಾರಕ್ಕೆ ಆರ್.ಬಿ. ತಿಮ್ಮಾಪುರ ಶ್ಲಾಘನೆ
ಬಾಗಲಕೋಟೆ, 26 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜುನ್ನೂರ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ದುಂಡಪ್ಪ ಕೆಂಚಣ್ಣವರ ಅವರು ಮೆದುಳು ನಿಷ್ಕ್ರಿಯಗೊಂಡು ನಿಧನ ಹೊಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಶಾಸಕ
ಸಂತಾಪ


ಬಾಗಲಕೋಟೆ, 26 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜುನ್ನೂರ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ದುಂಡಪ್ಪ ಕೆಂಚಣ್ಣವರ ಅವರು ಮೆದುಳು ನಿಷ್ಕ್ರಿಯಗೊಂಡು ನಿಧನ ಹೊಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಶಾಸಕ ಆರ್.ಬಿ. ತಿಮ್ಮಾಪುರ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು. ಅಲ್ಲದೆ ಶೋಕಸಂತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ಬಿ. ತಿಮ್ಮಾಪುರ ಅವರು, ದುಂಡಪ್ಪ ಕೆಂಚಣ್ಣವರ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದರು. ಅವರ ಅಗಲಿಕೆ ಪಕ್ಷಕ್ಕೂ ಹಾಗೂ ಸಮಾಜಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಇದೇ ವೇಳೆ ಮೃತರ ಕುಟುಂಬಸ್ಥರು ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಅತೀವ ದುಃಖದ ನಡುವೆಯೂ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅನೇಕ ಮಂದಿಯ ಜೀವ ಉಳಿಸಲು ಮುಂದಾಗಿರುವುದು ನಿಜಕ್ಕೂ ಅಪರೂಪದ ಮಾನವೀಯತೆಯ ಉದಾಹರಣೆಯಾಗಿದೆ ಎಂದು ಹೇಳಿದರು.

ಅಂಗಾಂಗ ದಾನವು ಜೀವದಾನಕ್ಕಿಂತ ಕಡಿಮೆಯಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಇತರರ ಬದುಕಿಗೆ ಹೊಸ ಆಶಾಕಿರಣವಾಗುವ ನಿರ್ಧಾರ ಕೈಗೊಂಡಿರುವ ಕುಟುಂಬದ ಸೇವಾಭಾವ, ನಿಸ್ವಾರ್ಥ ಮನೋಭಾವ ಹಾಗೂ ಸಾಮಾಜಿಕ ಬದ್ಧತೆ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು. ಅವರ ಈ ಮಹಾನ್ ಕಾರ್ಯಕ್ಕೆ ನನ್ನ ಅನಂತ ಅಭಿನಂದನೆಗಳು, ಎಂದು ಅವರು ತಿಳಿಸಿದರು.

ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಧೈರ್ಯ ಮತ್ತು ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ ಸಚಿವರು, ಕುಟುಂಬದೊಂದಿಗೆ ತಮ್ಮ ಸಂತಾಪವನ್ನು ಹಂಚಿಕೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande