ಪಿಒಕೆ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದೇ ಏಕೈಕ ವಿಷಯ: ರಾಜನಾಥ್ ಸಿಂಗ್
ದ್ರಾಸ್, ಜುಲೈ 26(ಹಿ.ಸ.): ಆ್ಯಂಕರ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಅವಿಭಾಜ್ಯ ಅಂಗವಾಗಿದ್ದು, ಭವಿಷ್ಯದಲ್ಲಿ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆದರೆ ಅದು ಕೇವಲ ಪಿಒಕೆ ವಿಷಯದ ಕುರಿತಾಗಿಯೇ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಕಾರ್ಗಿಲ್ ವಿಜಯ ದಿವ
ರಾಜನಾಥ ಸಿಂಗ್


ದ್ರಾಸ್, ಜುಲೈ 26(ಹಿ.ಸ.):

ಆ್ಯಂಕರ್:

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಅವಿಭಾಜ್ಯ ಅಂಗವಾಗಿದ್ದು, ಭವಿಷ್ಯದಲ್ಲಿ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆದರೆ ಅದು ಕೇವಲ ಪಿಒಕೆ ವಿಷಯದ ಕುರಿತಾಗಿಯೇ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ದ್ರಾಸ್‌ನ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ಭಯೋತ್ಪಾದನೆಯನ್ನು ತನ್ನ ರಾಜ್ಯ ನೀತಿಯ ಭಾಗವನ್ನಾಗಿ ಮಾಡಿಕೊಂಡಿದ್ದು, ಅಲ್ಲಿನ ಸೇನೆ ಮತ್ತು ಉಗ್ರ ಸಂಘಟನೆಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಆರೋಪಿಸಿದರು.

'ಆಪರೇಷನ್ ಸಿಂಧೂರ್' ಮೂಲಕ ಭಾರತೀಯ ಸೇನೆ ಉಗ್ರರು ಮತ್ತು ಅವರ ಬೆಂಬಲಿಗರಿಗೆ ತಕ್ಕ ಉತ್ತರ ನೀಡಿದ್ದು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನಕ್ಕೂ ಸಶಸ್ತ್ರ ಪಡೆಗಳು ಮುಟ್ಟಿನ ಉತ್ತರ ನೀಡಲಿವೆ ಎಂದು ಹೇಳಿದರು.

1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಅವರು, ಈ ವಿಜಯವು ಕೇವಲ ಸೇನಾ ಸಾಧನೆ ಮಾತ್ರವಲ್ಲ, ಭಾರತೀಯ ಯೋಧರ ಶೌರ್ಯ, ತ್ಯಾಗ ಮತ್ತು ರಾಷ್ಟ್ರಭಕ್ತಿಯನ್ನು ವಿಶ್ವಕ್ಕೆ ತೋರಿಸಿದ ಐತಿಹಾಸಿಕ ಕ್ಷಣವಾಗಿದೆ ಎಂದು ಹೇಳಿದರು.

ಭಾರತವು ತಂತ್ರಜ್ಞಾನ, ನವೋದ್ಯಮ, ಬಾಹ್ಯಾಕಾಶ ಹಾಗೂ ಡಿಜಿಟಲ್ ಮೂಲಸೌಕರ್ಯದಲ್ಲಿ ವೇಗವಾಗಿ ಮುನ್ನಡೆಯುತ್ತಿದ್ದರೆ, ಪಾಕಿಸ್ತಾನ ಭಯೋತ್ಪಾದನೆ, ಉಗ್ರವಾದ ಮತ್ತು ಗಡಿ ದಾಟುವ ನುಸುಳುವಿಕೆಗೆ ಉತ್ತೇಜನ ನೀಡುತ್ತಿದೆ ಎಂದು ರಾಜನಾಥ್ ಸಿಂಗ್ ಟೀಕಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande