ಶ್ರೀ ಕಾಡಸಿದ್ದೇಶ್ವರ ಪಟ್ಟಣ ಸಹಕಾರಿ ಬ್ಯಾಂಕಿನ 29ನೇ ವಾರ್ಷಿಕ ಮಹಾಸಭೆ
ಬಾಗಲಕೋಟೆ, 26 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಶ್ರೀ ಕಾಡಸಿದ್ದೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ವತಿಯಿಂದ ಆಯೋಜಿಸಲಾದ 29ನೇ ವಾರ್ಷಿಕ ಮಹಾಸಭೆ ಕಾರ್ಯಕ್ರಮವು ನಗರದ ಗಣ್ಯರು, ಬ್ಯಾಂಕಿನ ಸದಸ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಮೀಟ್


ಬಾಗಲಕೋಟೆ, 26 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಬನಹಟ್ಟಿ ನಗರದ ಶ್ರೀ ಕಾಡಸಿದ್ದೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ವತಿಯಿಂದ ಆಯೋಜಿಸಲಾದ 29ನೇ ವಾರ್ಷಿಕ ಮಹಾಸಭೆ ಕಾರ್ಯಕ್ರಮವು ನಗರದ ಗಣ್ಯರು, ಬ್ಯಾಂಕಿನ ಸದಸ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ತೇರದಾಳ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಸಿದ್ದು ಕೊಣ್ಣೂರ್ ಅವರು ನಗರದ ಪ್ರಮುಖ ಮುಖಂಡರೊಂದಿಗೆ ಭಾಗವಹಿಸಿ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರ್ಥಿಕ ಸದೃಢತೆಗೆ ಸಹಕಾರಿ ಬ್ಯಾಂಕುಗಳು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಸಹಕಾರಿ ಸಂಸ್ಥೆಗಳು ಸದಸ್ಯರ ವಿಶ್ವಾಸವನ್ನು ಉಳಿಸಿಕೊಂಡು ಪಾರದರ್ಶಕ ಆಡಳಿತದೊಂದಿಗೆ ಉತ್ತಮ ಸೇವೆ ನೀಡಿದಾಗ ಮಾತ್ರ ಜನರ ನಂಬಿಕೆಯನ್ನು ಮತ್ತಷ್ಟು ಗಳಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಬ್ಯಾಂಕಿನ ಆಡಳಿತ ಮಂಡಳಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ಅವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬ್ಯಾಂಕ್ ಹೆಚ್ಚಿನ ಪ್ರಗತಿಯನ್ನು ಸಾಧಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ವಾರ್ಷಿಕ ವರದಿ ಮಂಡನೆ, ಲೆಕ್ಕಪತ್ರಗಳ ಅನುಮೋದನೆ ಹಾಗೂ ವಿವಿಧ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಯಿತು. ಬ್ಯಾಂಕಿನ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು, ಷೇರುದಾರರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ನಗರದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಾಸಭೆಯು ಸಹಕಾರಿ ಕ್ಷೇತ್ರದ ಅಭಿವೃದ್ಧಿ, ಸದಸ್ಯರ ಹಿತಾಸಕ್ತಿ ಹಾಗೂ ಬ್ಯಾಂಕಿನ ಮುಂದಿನ ಬೆಳವಣಿಗೆಗೆ ಪೂರಕವಾದ ಚರ್ಚೆಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande