ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರದ ಮೇಲೆ ಒತ್ತಡ: ಡಿ.ಎಂ.ಜಿ. ಪರಮೇಶ್ವರ್
ತುಮಕೂರು, 26 ಜುಲೈ (ಹಿ.ಸ.): ಆ್ಯಂಕರ್ ರಾಜ್ಯದಲ್ಲಿ ತಲೆದೂರಿರುವ ತೀವ್ರ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಸಹಕಾರ ಕೋರುವ ನಿಟ್ಟಿನಲ್ಲಿ, ನಾಳೆ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಮಹತ್ವದ ಸಭೆಯನ್ನು ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರ
dcm-dr-g-parameshwara


ತುಮಕೂರು, 26 ಜುಲೈ (ಹಿ.ಸ.):

ಆ್ಯಂಕರ್

ರಾಜ್ಯದಲ್ಲಿ ತಲೆದೂರಿರುವ ತೀವ್ರ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಸಹಕಾರ ಕೋರುವ ನಿಟ್ಟಿನಲ್ಲಿ, ನಾಳೆ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಮಹತ್ವದ ಸಭೆಯನ್ನು ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೇಲೆ ಸೂಕ್ತ ಒತ್ತಡ ಹೇರುವ ಕುರಿತು ಸಂಸದರೊಂದಿಗೆ ಚರ್ಚಿಸಲಾಗುವುದು ಎಂದರು.

ಮುಂದಿನ ತಿಂಗಳು ರಾಜ್ಯದ ಬರ ಪರಿಸ್ಥಿತಿಯ ಸಂಪೂರ್ಣ ಮಾಹಿತಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಸಲಾಗುವುದು. ಪ್ರಸ್ತುತ ಸ್ಥಿತಿಯಲ್ಲಿ ಪರಿಹಾರದ ನಿಖರ ಮೊತ್ತವನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ತಿಳಿಸಿದ ಅವರು, ಈಗಾಗಲೇ ತಾವೂ ಹಾಗೂ ಮುಖ್ಯಮಂತ್ರಿಗಳು ರಾಜ್ಯದ ಮೂರು ವಿಭಾಗಗಳಲ್ಲಿ ಬರದ ಪರಿಶೀಲನೆ ನಡೆಸಿದ್ದೇವೆ. ಚಿತ್ರದುರ್ಗದಲ್ಲಿಯೂ ಸಭೆ ನಡೆಸಲಾಗಿದ್ದು, ಒಣಗಿಹೋಗಿರುವ ಸೂರ್ಯಕಾಂತಿ ಬೆಳೆಗಳನ್ನು ಖುದ್ದು ವೀಕ್ಷಿಸಿ ರೈತರಿಂದ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಮೈಸೂರು ವಿಭಾಗದಲ್ಲೂ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದರು.

ನೀಟ್ ಪರೀಕ್ಷೆ ವಿವಾದ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಪ್ರತಿಕ್ರಿಯೆ:

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್, ಲಕ್ಷಾಂತರ ಯುವಕರ ಭವಿಷ್ಯದ ಜೊತೆ ಆಟವಾಡುವ ಹಕ್ಕು ಯಾರಿಗೂ ಇಲ್ಲ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದರು. ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಮಹತ್ವದ ಪರೀಕ್ಷೆಯಾಗಿದ್ದು, ಇದರಲ್ಲಿ ಯಾವುದೇ ಲೋಪಗಳು ಆಗಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇದನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದರು.

ದೆಹಲಿಯಲ್ಲಿ ಯುವಕರು ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಸ್ಮರಿಸಿದ ಅವರು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆ ಸರಿಯಾಗಿಯೇ ಇತ್ತು. ಧರ್ಮೇಂದ್ರ ಪ್ರಧಾನ್ ಅವರು ಮೊದಲೇ ರಾಜೀನಾಮೆ ನೀಡಿದ್ದರೆ 23 ಜನ ಯುವಕರು ಸಾವಿಗೀಡಾಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಅವರ ಸಾವಿಗೂ ಇವರೇ ಕಾರಣಕರ್ತರಾಗಿದ್ದಾರೆ.

ಸದ್ಯ ಅವರು ರಾಜೀನಾಮೆ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಪ್ರಧಾನಮಂತ್ರಿಗಳು ಈ ಕುರಿತು ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಕಾದು ನೋಡೋಣ ಎಂದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande