ಬೆಂಗಳೂರು ಹೊರವಲಯದಲ್ಲಿ ಭೀಕರ ಅಗ್ನಿ ಅವಘಡ: ನಾಲ್ಕು ಖಾಸಗಿ ಬಸ್ ಗಳು ಸಂಪೂರ್ಣ ಭಸ್ಮ
ಆನೇಕಲ್, 26 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್ಗಳು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಬಸ್ ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿ
-fire-accident-anekal


ಆನೇಕಲ್, 26 ಜುಲೈ (ಹಿ.ಸ.):

ಆ್ಯಂಕರ್:

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್ಗಳು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಬಸ್ ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿದಿದ್ದು, ನೋಡನೋಡುತ್ತಿದ್ದಂತೆ ನಾಲ್ಕೂ ಬಸ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ, ಈ ನಾಲ್ಕು ಬಸ್ಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಇಲ್ಲಿ ನಿಲ್ಲಿಸಲಾಗಿತ್ತು. ಇವುಗಳಲ್ಲಿ ಒಂದು ಬಸ್ ಹಿಂದೆ ಬೆಂಗಳೂರು-ಬಳ್ಳಾರಿ ಮಾರ್ಗವಾಗಿ ಸಂಚರಿಸುತ್ತಿತ್ತು. ಉಳಿದ ಮೂರು ಬಸ್ಗಳು ಕಾರ್ಯಾಚರಣೆಯಲ್ಲಿರಲಿಲ್ಲ. ಬಸ್ ಮಾಲೀಕರು ಒಬ್ಬ ಚಾಲಕನನ್ನು ಕಾವಲು ಹಾಗೂ ನಿರ್ವಹಣೆಗಾಗಿ ನೇಮಿಸಿದ್ದು, ಆತ ಪ್ರತಿದಿನ ಬಂದು ಬಸ್ಗಳನ್ನು ಸ್ಟಾರ್ಟ್ ಮಾಡಿ ಹೋಗುತ್ತಿದ್ದರು. ಇಂದು ಎಂದಿನಂತೆ ನಿಲ್ಲಿಸಿದ್ದ ಬಸ್ಗಳ ಪೈಕಿ ಒಂದು ಬಸ್ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಪಕ್ಕದಲ್ಲಿದ್ದ ಉಳಿದ ಮೂರು ಬಸ್ಗಳಿಗೂ ಬೆಂಕಿ ವ್ಯಾಪಿಸಿದೆ.

ಘಟಣೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತುರ್ತಾಗಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ, ಅಷ್ಟರಲ್ಲಾಗಲೇ ನಾಲ್ಕೂ ಬಸ್ಗಳು ಬೆಂಕಿಗೆ ಸಂಪೂರ್ಣವಾಗಿ ಭಸ್ಮವಾಗಿದ್ದವು. ಈ ಅಗ್ನಿ ಅವಘಡಕ್ಕೆ ನಿಖರವಾದ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸದ್ಯ ಬಸ್ಗಳ ನಿಜವಾದ ಮಾಲೀಕರ ವಿವರಗಳು ಪತ್ತೆಯಾಗಿಲ್ಲ. ಈ ಕುರಿತು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande