ದಿವಂಗತ ಡಿ. ಸುಧಾಕರ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ
ಚಿತ್ರದುರ್ಗ, 26 ಜುಲೈ (ಹಿ.ಸ.): ಆ್ಯಂಕರ್: ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರ ಅಗಲಿಕೆಯಿಂದ ಕೇವಲ ಜಿಲ್ಲೆಗಷ್ಟೇ ಅಲ್ಲದೆ, ಇಡೀ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಹಿರಿಯೂರಿನಲ್ಲಿ ಹಮ್ಮಿಕೊಳ್ಳ
m-siddaramaiah


ಚಿತ್ರದುರ್ಗ, 26 ಜುಲೈ (ಹಿ.ಸ.):

ಆ್ಯಂಕರ್:

ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರ ಅಗಲಿಕೆಯಿಂದ ಕೇವಲ ಜಿಲ್ಲೆಗಷ್ಟೇ ಅಲ್ಲದೆ, ಇಡೀ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಹಿರಿಯೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ಡಿ. ಸುಧಾಕರ್ ಅವರ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸುಧಾಕರ್ ಅವರ ಆಶಯಗಳಂತೆ ಕ್ಷೇತ್ರದ ಜನತೆ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ನುಡಿದಂತೆ ನಡೆದ ಸರ್ಕಾರ ನಮ್ಮದು:

ಕಾಂಗ್ರೆಸ್ ಸರ್ಕಾರವು ಚುನಾವಣೆಯಲ್ಲಿ ನೀಡಿದ ಪ್ರತಿಯೊಂದು ಭರವಸೆಯಂತೆ ನಡೆದುಕೊಂಡಿದೆ ಎಂದ ಸಿದ್ದರಾಮಯ್ಯ, ಬಡವರ ಪರವಾದ ಅನೇಕ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಸುಧಾಕರ್ ಅವರ ಕನಸುಗಳನ್ನು ನನಸಾಗಿಸಲು ಮತ್ತು ಅವರ ಆತ್ಮಕ್ಕೆ ನಿಜವಾದ ಶಾಂತಿ ದೊರೆಯಬೇಕಾದರೆ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಜನತೆಯಲ್ಲಿ ಮನವಿ ಮಾಡಿದರು.

ಉಪಚುನಾವಣೆಯಲ್ಲಿ ಪ್ರಚಾರಕ್ಕೆ ಬರುವುದಾಗಿ ಭರವಸೆ:

ಸಭೆಯಲ್ಲಿ ಸೇರಿರುವ ಜನಸ್ತೋಮವನ್ನು ನೋಡಿದರೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ ಎಂಬುದು ಸ್ಪಷ್ಟವಾಗುತ್ತದೆ ಎಂದ ಸಿದ್ದರಾಮಯ್ಯ, ಉಪಚುನಾವಣೆಯ ಸಂದರ್ಭದಲ್ಲಿ ತಾವೇ ಖುದ್ದು ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವುದಾಗಿ ತಿಳಿಸಿದರು. ಡಿ. ಸುಧಾಕರ್ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿ, ಅವರ ಅಗಲಿಕೆಯ ದುಃಖದಲ್ಲಿ ಸರ್ಕಾರ ಹಾಗೂ ಪಕ್ಷವು ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande