
ಬೆಂಗಳೂರು, 26 ಜುಲೈ (ಹಿ.ಸ.):
ಆ್ಯಂಕರ್:
ಕೋಲಾರ ಜಿಲ್ಲೆಗೆ ಕಳೆದ ಮೂರು ಅವಧಿಗಳಿಂದ ಸಚಿವ ಸ್ಥಾನ ನೀಡದೆ ತೀವ್ರವಾಗಿ ಕಡೆಗಣಿಸಲಾಗಿದ್ದು, ಈ ಬಾರಿ ಜಿಲ್ಲೆಗೆ ತಪ್ಪದೇ ಸಚಿವ ಸ್ಥಾನ ನೀಡಲೇಬೇಕು ಎಂದು ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಪಕ್ಷದ ಕಾರ್ಯಕರ್ತರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಈ ಒತ್ತಾಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿರುವ ಕಾಂಗ್ರೆಸ್ ಶಾಸಕರೆಲ್ಲರೂ ಸಂಪೂರ್ಣ ಒಗ್ಗಟ್ಟಾಗಿದ್ದು, ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ಬಳಿ ಈಗಾಗಲೇ ಸಚಿವ ಸ್ಥಾನಕ್ಕಾಗಿ ಸ್ಪಷ್ಟ ಬೇಡಿಕೆ ಮಂಡಿಸಲಾಗಿದೆ ಎಂದರು.
ಸ್ಥಳೀಯ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಗದಿದ್ದರೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.
ಬೇರೆಡೆಯಿಂದ ಬಂದು ಉಸ್ತುವಾರಿ ವಹಿಸಿಕೊಳ್ಳುವುದಕ್ಕಿಂತ ಸ್ಥಳೀಯವಾಗಿ ಅಧಿಕಾರವಿದ್ದಾಗ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪಕ್ಷದ ಹಿರಿಯ ಮುಖಂಡರು ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ, ಬಲಗೈ ಸಮುದಾಯ ಹಾಗೂ ಸ್ಥಳೀಯ ನಾಯಕರಿಗೆ ಸೂಕ್ತ ಪ್ರಾಧಾನ್ಯತೆ ನೀಡಬೇಕು ಎಂದು ಶಾಸಕರು ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII