
ಬೆಂಗಳೂರು, 26 ಜುಲೈ (ಹಿ.ಸ.):
ಆ್ಯಂಕರ್:
ಪೂರ್ವ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಿ ಸುರಕ್ಷಿತ ಹಾಗೂ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ಸಂಚಾರ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಮುಖ ಜಂಕ್ಷನ್‌ಗಳನ್ನು ಪರಿಶೀಲಿಸಿದರು.
ಪರಿಶೀಲನೆ ವೇಳೆ ಹೋಪ್ ಫಾರ್ಮ್ ಜಂಕ್ಷನ್ ಅಂಡರ್‌ಪಾಸ್ ಕಾಮಗಾರಿಯನ್ನು ತ್ವರಿತಗೊಳಿಸಲು ಅಡೆತಡೆಗಳನ್ನು ನಿವಾರಿಸಿ ಮೂರು ಪಾಳಿಗಳಲ್ಲಿ ಕಾಮಗಾರಿ ನಡೆಸಲು ಸೂಚಿಸಿದರು. ಇದೇ ವೇಳೆ ಅಲ್ಪೈನ್ ಇಕೋ ರಸ್ತೆ ಬಳಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣದ ಸಾಧ್ಯತಾ ಅಧ್ಯಯನ ಕೈಗೊಳ್ಳಲು ತೀರ್ಮಾನಿಸಲಾಯಿತು.
ಮಾರತಹಳ್ಳಿ ಜಂಕ್ಷನ್‌ನಲ್ಲಿ ಸ್ಕೈವಾಕ್ ಹಾಗೂ ಮುಕ್ತ ಎಡ ತಿರುವು ನಿರ್ಮಾಣ, ತುಬರಹಳ್ಳಿ–ವಿಬ್‌ಗ್ಯೋರ್ ಶಾಲೆ ರಸ್ತೆಯುದ್ದಕ್ಕೂ ಬಫರ್ ರಸ್ತೆ ಅಭಿವೃದ್ಧಿ, ಪಣತ್ತೂರು ಎಸ್–ಕ್ರಾಸ್‌ನಲ್ಲಿ ರಸ್ತೆ ಅಗಲೀಕರಣ ಹಾಗೂ ಭೋಗನಹಳ್ಳಿ ರಸ್ತೆಯಲ್ಲಿ ಮುಕ್ತ ಎಡ ತಿರುವು ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಸಂಚಾರ ಪೊಲೀಸ್, ಬೆಸ್ಕಾಂ, ಗೇಲ್, ಭಾರತೀಯ ರೈಲ್ವೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪೂರ್ವ ಬೆಂಗಳೂರಿನ ಸಂಚಾರ ಸಮಸ್ಯೆಗೆ ಶಾಶ್ವತ ಮೂಲಸೌಕರ್ಯ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.