ಬಿಡದಿ ಪ್ರಕರಣ: ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್:ಬಿಡದಿಯಲ್ಲಿ ರಾಜಕೀಯ ಪ್ರೇರಿತವಾಗಿ ದಾಖಲಿಸಲಾಗಿದೆ ಎಂದು ಆರೋಪಿಸಲಾದ ಎಫ್‌ಐಆರ್‌ ಪ್ರಕರಣದಲ್ಲಿ ರಾಮನಗರ ನ್ಯಾಯಾಲಯ ಸ್ಥಳೀಯ 11 ರೈತರು ಹಾಗೂ ನಿವಾಸಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವ
ಬಿಡದಿ ಪ್ರಕರಣ: ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ನಿಖಿಲ್ ಕುಮಾರಸ್ವಾಮಿ


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:ಬಿಡದಿಯಲ್ಲಿ ರಾಜಕೀಯ ಪ್ರೇರಿತವಾಗಿ ದಾಖಲಿಸಲಾಗಿದೆ ಎಂದು ಆರೋಪಿಸಲಾದ ಎಫ್‌ಐಆರ್‌ ಪ್ರಕರಣದಲ್ಲಿ ರಾಮನಗರ ನ್ಯಾಯಾಲಯ ಸ್ಥಳೀಯ 11 ರೈತರು ಹಾಗೂ ನಿವಾಸಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಇದು ಸತ್ಯಕ್ಕೆ ಸಂದ ಜಯವಾಗಿದ್ದು, ತಮ್ಮ ಭೂಮಿ ಮತ್ತು ಜೀವನೋಪಾಯಕ್ಕಾಗಿ ಧ್ವನಿ ಎತ್ತುವವರನ್ನು ಅಧಿಕಾರದ ಬಲದಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಕೀಲ ಪ್ರದೀಪ್ ಅವರ ನೇತೃತ್ವದ ಕಾನೂನು ತಂಡದ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ಸುಳ್ಳು ಪ್ರಕರಣಗಳು ಸಂಪೂರ್ಣವಾಗಿ ರದ್ದಾಗುವವರೆಗೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಬಿಡದಿಯ ಜನರ ಪರವಾಗಿ ನೆಲದಲ್ಲೂ ಹಾಗೂ ನ್ಯಾಯಾಲಯದಲ್ಲೂ ನಿಲ್ಲುತ್ತೇವೆ. ಅವರಿಗೆ ಸಂಪೂರ್ಣ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande